ಅರಣ್ಯಕಾಂಡ 31:16 - ಪರಿಶುದ್ದ ಬೈಬಲ್16 ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಪೆಗೋರದ ಬಾಳನ ವಿಷಯದಲ್ಲಿ ಬಿಳಾಮನ ದುರಾಲೋಚನೆಯನ್ನು ಅನುಸರಿಸಿ, ಇಸ್ರಯೇಲರನ್ನು ಸರ್ವೇಶ್ವರನಿಗೆ ದ್ರೋಹಿಗಳನ್ನಾಗಿಸಿ, ಸಮಾಜದವರಲ್ಲಿ ಘೋರ ವ್ಯಾಧಿಯುಂಟಾಗುವಂತೆ ಮಾಡಿದವರು ಅವರೇ ಅಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲ್ಯರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿಯುಂಟಾಗುವಂತೆ ಮಾಡಿದವರು ಇವರೇ ಅಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು. ಅಧ್ಯಾಯವನ್ನು ನೋಡಿ |
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.