Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:30 - ಪರಿಶುದ್ದ ಬೈಬಲ್‌

30 ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮಿಕ್ಕ ಇಸ್ರಯೇಲರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಿ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ವಿುಕ್ಕ ಇಸ್ರಾಯೇಲ್ಯರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:30
21 ತಿಳಿವುಗಳ ಹೋಲಿಕೆ  

ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.


ದೇವದರ್ಶನಗುಡಾರದಲ್ಲಿ ಪವಿತ್ರ ಗುಡಾರವನ್ನು, ಹೊರಡೇರೆಯನ್ನು ಮತ್ತು ಅದರ ಮೇಲ್ಹೊದಿಕೆಯನ್ನು ನೋಡಿಕೊಳ್ಳವುದು ಗೇರ್ಷೋನ ವಂಶದವರ ಕೆಲಸವಾಗಿತ್ತು. ಇದಲ್ಲದೆ ಅವರು ಅಂಗಳದ ಪರದೆಯನ್ನೂ ನೋಡಿಕೊಳ್ಳುತ್ತಿದ್ದರು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.


ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ಹೀಗೆ ಲೇವಿಯರು ತಾವು ಮಾಡಬೇಕಾದ ಕೆಲಸಗಳನ್ನೆಲ್ಲಾ ಮಾಡಿದರು. ಅವರು ಪವಿತ್ರ ಗುಡಾರವನ್ನು ಮತ್ತು ಪವಿತ್ರಸ್ಥಳವನ್ನು ನೋಡಿಕೊಂಡರು; ತಮ್ಮ ಸಂಬಂಧಿಕರೂ ಆರೋನನ ಕುಲದವರೂ ಆಗಿದ್ದ ಯಾಜಕರಿಗೆ ಸಹಾಯ ಮಾಡಿದರು.


ಯುದ್ಧಕ್ಕೆ ಹೋದ ಸೈನಿಕರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು ಮತ್ತು ಕುರಿಗಳನ್ನು


ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೋಸ್ಕರ ಕಪ್ಪಕಾಣಿಕೆಯನ್ನು ತೆಗೆದುಕೊಂಡು, ಅದನ್ನು ಪ್ರತ್ಯೇಕಿಸಿ ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.


ಯೆಹೋವನು ಆಜ್ಞಾಪಿಸಿದ್ದಂತೆಯೇ ಮೋಶೆ ಮತ್ತು ಎಲ್ಲಾಜಾರನು ಮಾಡಿದರು.


ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”


ಅವರು ಕಾವಲುಗಾರರಾಗಿ ದೇವದರ್ಶನಗುಡಾರದ ಬಳಿ ಇತರ ಲೇವಿಯರಿಗೆ ಸಹಾಯ ಮಾಡಬಹುದೇ ಹೊರತು ಭಾರವಾದ ಕೆಲಸವನ್ನು ಮಾಡಲೇಕೂಡದು. ನೀನು ಈ ರೀತಿಯಲ್ಲಿ ಲೇವಿಯರಿಗೆ ಕೆಲಸವನ್ನು ಹಂಚಿಕೊಡಬೇಕು.”


ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.


ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸಮಾಡಿ ಅನೇಕಾನೇಕ ಕುರಿಗಳನ್ನೂ ಒಂಟೆಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು