Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:4 - ಪರಿಶುದ್ದ ಬೈಬಲ್‌

4 ಇಸ್ರೇಲಿನ ಕುಲಗಳವರಲ್ಲಿ ಪ್ರತಿಯೊಂದು ಕುಲದಿಂದ ಒಂದು ಸಾವಿರ ಗಂಡಸರನ್ನು ದಂಡೆಯಾತ್ರೆಗೆ ಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಮಿದ್ಯಾನರಿಗೆ ಸರ್ವೇಶ್ವರ ಆಜ್ಞಾಪಿಸಿದ ದಂಡನೆಯನ್ನು ಮಾಡಬೇಕು,” ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ವಿುದ್ಯಾನ್ಯರಿಗೆ ಯೆಹೋವನು ಆಜ್ಞಾಪಿಸಿದ ದಂಡನೆಯನ್ನು ಮಾಡಬೇಕು ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಯುದ್ಧಕ್ಕೆ ಕಳುಹಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:4
5 ತಿಳಿವುಗಳ ಹೋಲಿಕೆ  

ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಆಗ ಯೆಹೋವನು ಗಿದ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಈ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು. ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ.


ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ.


ಆಗ ಮೋಶೆ ಇಸ್ರೇಲರಿಗೆ, “ಮಿದ್ಯಾನ್ಯರು ಯೆಹೋವನಿಗೆ ವಿರೋಧವಾಗಿ ಮಾಡಿದ ಕೃತ್ಯಗಳಿಗಾಗಿ ಅವರ ಮೇಲೆ ಆಕ್ರಮಣ ಮಾಡಿ ದಂಡಿಸಲು ನಿಮ್ಮಲ್ಲಿರುವ ಗಂಡಸರಲ್ಲಿ ಕೆಲವರನ್ನು ದಂಡೆಯಾತ್ರೆಗೆ ಆರಿಸಿಕೊಳ್ಳಬೇಕು.


ಆದ್ದರಿಂದ ಇಸ್ರೇಲರ ಕುಲಗಳಿಂದ ಪ್ರತಿಯೊಂದು ಕುಲಕ್ಕೆ ಒಂದು ಸಾವಿರ ಗಂಡಸರ ಪ್ರಕಾರ ಹನ್ನೆರಡು ಸಾವಿರ ಗಂಡಸರನ್ನು ಯುದ್ಧಕ್ಕೆ ಆರಿಸಿಕೊಳ್ಳಬೇಕು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು