Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:41 - ಪರಿಶುದ್ದ ಬೈಬಲ್‌

41 ಮೋಶೆಯು ಯೆಹೋವನ ಅಪ್ಪಣೆಯ ಮೇರೆಗೆ ಆ ಕಪ್ಪವನ್ನೆಲ್ಲ ಯೆಹೋವನಿಗೆ ಕೊಡುಗೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಈ ಕಪ್ಪವನ್ನು ಸರ್ವೇಶ್ವರನಿಗೆ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:41
14 ತಿಳಿವುಗಳ ಹೋಲಿಕೆ  

ಇಸ್ರೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲವನ್ನು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ಪಾಲಾಗಿ ಅನುಗ್ರಹಿಸಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ನಂತರದ ಸಂತತಿಯವರೊಡನೆಯೂ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”


ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ.


ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.


ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.


ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.


“ಒಬ್ಬನು ದೇವರಿಗೆ ವಿಶೇಷ ಕಾಣಿಕೆಯನ್ನು ಅರ್ಪಿಸಿದರೆ, ಅದನ್ನು ಸ್ವೀಕರಿಸುವ ಯಾಜಕನು ತನಗಾಗಿ ಅದನ್ನು ಇಟ್ಟುಕೊಳ್ಳಬಹುದು. ಅದು ಅವನದಾಗಿರುತ್ತದೆ. ಒಬ್ಬನು ಈ ವಿಶೇಷ ಕಾಣಿಕೆಗಳನ್ನು ಕೊಡಬೇಕಾಗಿಲ್ಲ. ಆದರೆ ಅವನು ಅವುಗಳನ್ನು ಕೊಟ್ಟರೆ ಅವು ಯಾಜಕನಿಗೆ ಸೇರುತ್ತವೆ.”


ಸೈನಿಕರು ಹದಿನಾರು ಸಾವಿರ ಮಂದಿ ಕನ್ನಿಕೆಯರನ್ನು ಪಡೆದುಕೊಂಡರು. ಅವರು ಮೂವತ್ತೆರಡು ಮಂದಿ ಕನ್ನಿಕೆಯರನ್ನು ಯೆಹೋವನಿಗೆ ಕೊಟ್ಟರು.


ಮೋಶೆಯು ಜನರಿಗೆ ಸೇರಿದ ಅರ್ಧಭಾಗವನ್ನು ಎಣಿಸಿದನು. ಯುದ್ಧಕ್ಕೆ ಹೋಗಿದ್ದ ಸೈನಿಕರಿಂದ ಮೋಶೆಯು ತೆಗೆದುಕೊಂಡ ಅರ್ಧಭಾಗ: ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು,


ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು