ಅರಣ್ಯಕಾಂಡ 31:6 - ಪರಿಶುದ್ದ ಬೈಬಲ್6 ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮೋಶೆ ಇವರನ್ನು ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನ ಮುಂದಾಳತ್ವದಲ್ಲಿ ಪವಿತ್ರ ಉಪಕರಣಗಳೊಂದಿಗೂ ಯುದ್ಧಕಹಳೆಗಳೊಂದಿಗೂ ಯುದ್ಧಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನಿಗೆ - ದೇವರ ಸಾಮಾನುಗಳನ್ನೂ ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.