ಅರಣ್ಯಕಾಂಡ 31:8 - ಪರಿಶುದ್ದ ಬೈಬಲ್8 ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಬೆಯೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೆಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ, “ಒಂದು ಜನಾಂಗವು ಈಜಿಪ್ಟಿನಿಂದ ಬಂದಿದೆ. ಅವರು ದೇಶವನ್ನೆಲ್ಲಾ ಮುಚ್ಚಿಕೊಂಡು ನನ್ನ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ನಮಗಿಂತ ಬಲಿಷ್ಠರು.