Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:1 - ಪರಿಶುದ್ದ ಬೈಬಲ್‌

1 ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಾಗಿದ್ದವು. ಯಗ್ಜೇರ್ ಹಾಗು ಗಿಲ್ಯಾದ್ ಪ್ರದೇಶಗಳನ್ನು ದನಕುರಿಗಳ ಮೇವಿಗೆ ತಕ್ಕ ಸ್ಥಳ ಎಂದು ಅವರು ನೋಡಿ ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶಗಳನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:1
30 ತಿಳಿವುಗಳ ಹೋಲಿಕೆ  

ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.


ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,


“ಯೆಹೋವನು ಇಸ್ರೇಲರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ, ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ಪಶುಗಳ ಮೇವಿಗೆ ಒಳ್ಳೆಯ ಸ್ಥಳವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ಪಶುಗಳು ಇವೆ.


ಈ ಲೋಕದಲ್ಲಿರುವ ಕೆಟ್ಟವುಗಳು ಇಂತಿವೆ: ನಮ್ಮ ಪಾಪಸ್ವಭಾವವನ್ನು ತಣಿಸಲು ಮಾಡಲಿಚ್ಛಿಸುವ ಕಾರ್ಯಗಳು, ನಾವು ನೋಡುವ ಪಾಪಪೂರಿತವಾದದ್ದನ್ನು ಪಡೆಯಲಿಚ್ಛಿಸುವುದು, ಮತ್ತು ನಮ್ಮಲ್ಲಿರುವ ವಸ್ತುಗಳಲ್ಲಿಯೇ ದುರಹಂಕಾರಪಡುವುದು. ಆದರೆ ಇವುಗಳಲ್ಲಿ ಯಾವುದೂ ತಂದೆಯಿಂದ ಬರುವುದಿಲ್ಲ. ಇವುಗಳೆಲ್ಲ ಈ ಲೋಕದಿಂದ ಬರುತ್ತವೆ.


ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.


“‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’”


ಅವರು ಜೋರ್ಡನ್ ನದಿಯನ್ನು ದಾಟಿ ಅರೋಯೇರಿನಲ್ಲಿ ಪಾಳೆಯ ಮಾಡಿಕೊಂಡರು. ಅವರ ಪಾಳೆಯವು ನಗರದ ಬಲ ಅಂಚಿನಲ್ಲಿತ್ತು. (ಆ ನಗರವು ಗಾದ್ ಕಣಿವೆಯ ಮಧ್ಯಭಾಗದಲ್ಲಿಯೂ ಯಗ್ಜೇರಿನ ಮಾರ್ಗದಲ್ಲಿಯೂ ಇತ್ತು.)


ಮೋಶೆ ಅವರಿಗೆ ಯಗ್ಜೇರಿನ ಪ್ರದೇಶ ಮತ್ತು ಗಿಲ್ಯಾದಿನ ಎಲ್ಲ ಪಟ್ಟಣಗಳನ್ನೂ ರಬ್ಬಾದ ಹತ್ತಿರವಿದ್ದ ಅರೋಯೇರ್‌ವರೆಗಿನ ಅಮ್ಮೋನಿಯರ ಅರ್ಧಪ್ರದೇಶವನ್ನು ಕೊಟ್ಟನು.


ನಮ್ಮ ಹೆಂಡತಿಯರು, ಮಕ್ಕಳು, ಪಶುಗಳು ಮತ್ತು ಇತರ ಪ್ರಾಣಿಗಳು ಗಿಲ್ಯಾದಿನ ಊರುಗಳಲ್ಲಿ ವಾಸಿಸುವರು.


ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು.


ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.


ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ. ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೊ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಆ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.


ಈ ಕಾಲದಲ್ಲಿ ಲೋಟನು ಸಹ ಅಬ್ರಾಮನೊಡನೆ ಪ್ರಯಾಣಮಾಡುತ್ತಿದ್ದನು. ಲೋಟನಿಗೂ ಸಹ ಕುರಿಮಂದೆಗಳೂ ಪಶುಹಿಂಡುಗಳೂ ಗುಡಾರಗಳೂ ಇದ್ದವು.


ಆಗ ಅಬ್ರಾಮನು ತುಂಬ ಐಶ್ವರ್ಯವಂತನಾಗಿದ್ದನು. ಅವನಿಗೆ ಅನೇಕ ಪಶುಗಳಿದ್ದವು; ಬಹಳ ಬೆಳ್ಳಿಬಂಗಾರಗಳಿದ್ದವು.


ಆದ್ದರಿಂದ ರೂಬೇನ್ ಮತ್ತು ಗಾದ್ ಕುಲದವರು ಮೋಶೆಯ ಬಳಿಗೆ ಬಂದರು. ಅವರು ಮೋಶೆಯ ಸಂಗಡದಲ್ಲೂ ಯಾಜಕನಾದ ಎಲ್ಲಾಜಾರನ ಸಂಗಡದಲ್ಲೂ ಜನರ ನಾಯಕರ ಸಂಗಡದಲ್ಲೂ ಮಾತಾಡಿ ಹೀಗೆ ಹೇಳಿದರು:


ಅದರ ಒಳ್ಳೆಯ ಭಾಗವನ್ನು ತನಗೆ ಆರಿಸಿಕೊಳ್ಳುವನು. ರಾಜನ ಭಾಗವನ್ನು ತಾನಿಟ್ಟುಕೊಳ್ಳುವನು. ಜನರ ನಾಯಕರು ಆತನ ಬಳಿಗೆ ಬರುವರು. ಯೆಹೋವನು ಒಳ್ಳೆಯದೆಂದು ಹೇಳುವ ಕಾರ್ಯಗಳನ್ನು ಮಾಡುವನು. ಇಸ್ರೇಲ್ ಜನರಿಗೆ ಸರಿಯಾದ ಕಾರ್ಯವನ್ನೇ ಮಾಡುವನು.”


ಆದ್ದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.


ಹೀಗಿರಲು ನೀವು ಕುರಿಯ ಹಟ್ಟಿಗಳ ಗೋಡೆಗೆ ಒರಗಿಕೊಂಡು ಕುಳಿತಿರುವುದೇಕೆ? ರೂಬೇನ್ಯರ ಶೂರ ಸೈನಿಕರು ಯುದ್ಧದ ಬಗ್ಗೆ ಬಹಳವಾಗಿ ಯೋಚಿಸಿದರು, ಆದರೆ ಕುರಿಗಳಿಗಾಗಿ ಬಾರಿಸುವ ಸಂಗೀತವನ್ನು ಕೇಳುತ್ತಾ ಮನೆಯಲ್ಲಿ ಇದ್ದುಬಿಟ್ಟರು.


ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.


ಆದರೆ ಮೊದಲು ಇಸ್ರೇಲರು ರೂಬೇನ್ಯರ, ಗಾದ್ಯರ, ಮನಸ್ಸೆಕುಲದ ಅರ್ಧಜನರ ಸಂಗಡ ಮಾತನಾಡಲು ಕೆಲವು ಜನರನ್ನು ಕಳುಹಿಸಿದರು. ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನ ನೇತೃತ್ವದಲ್ಲಿ ಪ್ರತಿಯೊಂದು ಕುಲದಿಂದ ಒಬ್ಬೊಬ್ಬ ವ್ಯಕ್ತಿಯಂತೆ ಹತ್ತು ಜನರನ್ನು ಕಳುಹಿಸಿದರು. ಈ ಹತ್ತು ಜನರು ತಮ್ಮ ಕುಲಗಳ ಮುಖ್ಯ ನಾಯಕರಾಗಿದ್ದರು.


ಆಗ ಅವರು ಗಿಲ್ಯಾದಿಗೆ ಮತ್ತು ತಖ್ತೀಮ್ ಹೊಜೀ ಪ್ರದೇಶಕ್ಕೂ ಯಾನಿನದಾನಿಗೂ, ಚೀದೋನಿನ ಸುತ್ತಲೂ ಹೋದರು.


ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು.


ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?


ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಬ್ಮವೇ, ನಿನ್ನ ದ್ರಾಕ್ಷಿಬಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನ್ನ ಹಣ್ಣುಗಳನ್ನು ಮತ್ತು ದ್ರಾಕ್ಷಿಗಳನ್ನು ಕಿತ್ತುಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು