ಅರಣ್ಯಕಾಂಡ 32:13 - ಪರಿಶುದ್ದ ಬೈಬಲ್13 “ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, ತನ್ನನ್ನು ಬೇಸರಗೊಳಿಸಿದ್ದ ಇಡೀ ತಲೆಮಾರು ಸಾಯುವತನಕ ಇಸ್ರೇಲರನ್ನು ಮರುಭೂಮಿಯಲ್ಲಿ ನಲವತ್ತು ವರ್ಷಗಳ ಕಾಲ ಅಲೆದಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ತಮ್ಮ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳವರಾಗಿದ್ದ ಆ ಪೀಳಿಗೆಯವರೆಲ್ಲರು ನಾಶವಾಗುವ ತನಕ, ಅಂದರೆ ನಾಲ್ವತ್ತುವರ್ಷ ಕಾಲ, ಇಸ್ರಯೇಲರನ್ನು ಮರುಭೂಮಿಯಲ್ಲೆ ಅಲೆಯುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ಇಸ್ರಾಯೇಲ್ಯರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ, ಅಂದರೆ ನಾಲ್ವತ್ತು ವರುಷಕಾಲ, ಇಸ್ರಾಯೇಲ್ಯರನ್ನು ಅರಣ್ಯದಲ್ಲಿ ತಿರುಗಾಡ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |