ಅರಣ್ಯಕಾಂಡ 32:14 - ಪರಿಶುದ್ದ ಬೈಬಲ್14 ದುಷ್ಟ ಸಂತತಿಯವರೇ, ಈಗ ನೀವು ಯೆಹೋವನ ಭಯಂಕರವಾದ ಕೋಪವನ್ನು ಇನ್ನೂ ಹೆಚ್ಚಾಗಿ ಮಾಡಲು ನಿಮ್ಮ ಪೂರ್ವಿಕರ ಸ್ಥಾನವನ್ನು ತೆಗೆದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಈಗ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲ್ಯರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ. ಅಧ್ಯಾಯವನ್ನು ನೋಡಿ |
“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.