ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.
“ನಿನ್ನ ಎಲ್ಲಾ ಹೆಂಡತಿಯರನ್ನು ಮತ್ತು ಮಕ್ಕಳನ್ನು ಹೊರತರಲಾಗುವುದು. ಅವರನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ನೀನೂ ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರೆ. ಬಾಬಿಲೋನಿನ ರಾಜನು ನಿನ್ನನ್ನು ವಶಪಡಿಸಿಕೊಳ್ಳುವನು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲಾಗುವುದು” ಎಂದು ಉತ್ತರಿಸಿದನು.