ಅರಣ್ಯಕಾಂಡ 32:19 - ಪರಿಶುದ್ದ ಬೈಬಲ್19 ನಮಗೆ ಜೋರ್ಡನ್ ಹೊಳೆಯ ಈಚೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದ್ದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವುದಿಲ್ಲ” ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಮಗೆ ಜೋರ್ಡನ್ ನದಿಯ ಈಚೆ ಪೂರ್ವ ದಿಕ್ಕಿನಲ್ಲಿ ಸೊತ್ತು ದೊರಕಿದ್ದುದರಿಂದ ನಾವು ನದಿಯ ಆಚೆ ಎಲ್ಲಿಯೂ ಅವರೊಂದಿಗೆ ಸೊತ್ತನ್ನು ಅಪೇಕ್ಷಿಸುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಮಗೆ ಯೊರ್ದನ್ ಹೊಳೆಯ ಈಚೆ ಮೂಡಣ ದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವದಿಲ್ಲ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸೊತ್ತನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸೊತ್ತು ನಮಗೆ ಯೊರ್ದನ್ ನದಿಯ ಈಚೆ ಪೂರ್ವದಿಕ್ಕಿನಲ್ಲಿ ಬಂತು,” ಎಂದನು. ಅಧ್ಯಾಯವನ್ನು ನೋಡಿ |
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.