ಅರಣ್ಯಕಾಂಡ 32:20 - ಪರಿಶುದ್ದ ಬೈಬಲ್20-22 ಅದಕ್ಕೆ ಮೋಶೆ, “ನೀವು ನಿಮ್ಮ ಮಾತಿನಂತೆ ಯೆಹೋವನ ಮುಂದೆ ಸನ್ನದ್ಧರಾದ ಸೈನಿಕರಾಗಿ ಯುದ್ಧಕ್ಕೆ ಹೋಗುವುದಾದರೆ, ಯೆಹೋವನು ತನ್ನ ವೈರಿಗಳನ್ನು ಓಡಿಸುವ ತನಕ ಮತ್ತು ಆ ದೇಶವನ್ನು ಗೆದ್ದುಕೊಳ್ಳುವ ತನಕ ಪ್ರತಿಯೊಬ್ಬ ಪ್ರವೀಣ ಸೈನಿಕನು ಯೆಹೋವನ ಮುಂದೆ ಜೋರ್ಡನ್ ನದಿಯನ್ನು ದಾಟುವುದಾದರೆ, ಆ ಬಳಿಕ ನೀವು ನಿಮ್ಮ ಮನೆಗಳಿಗೆ ಹಿಂತಿರುಗಬಹುದು ಮತ್ತು ನೀವು ಯೆಹೋವನ ದೃಷ್ಟಿಯಲ್ಲಿಯೂ ಇಸ್ರೇಲರ ದೃಷ್ಟಿಯಲ್ಲಿಯೂ ನಿಮ್ಮ ಕರ್ತವ್ಯವನ್ನು ಮಾಡಿದವರಾಗಿರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದಕ್ಕೆ ಮೋಶೆ ಅವರಿಗೆ, “ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಮೋಶೆ, “ನೀವು ಈ ಮಾತಿನಂತೆ ನಡೆಯುವುದಾದರೆ ನಿಮ್ಮಲ್ಲಿರುವ ಯೋಧರೆಲ್ಲರು ಯುದ್ಧಸನ್ನದ್ಧರಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದಕ್ಕೆ ಮೋಶೆ - ನೀವು ಆ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮೋಶೆಯು ಅವರಿಗೆ, “ನೀವು ಈ ಕಾರ್ಯವನ್ನು ಮಾಡಿದರೆ, ನೀವು ಯೆಹೋವ ದೇವರ ಮುಂದೆ ಯುದ್ಧಕ್ಕೆ ಸಿದ್ಧವಾಗಿದ್ದರೆ, ಅಧ್ಯಾಯವನ್ನು ನೋಡಿ |
ಆದ್ದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.