Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:23 - ಪರಿಶುದ್ದ ಬೈಬಲ್‌

23 ಆದರೆ ನೀವು ಈ ಸಂಗತಿಗಳನ್ನು ಮಾಡದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ನೀವು ಹಾಗೆ ಮಾಡದೆಹೋದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ; ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವದು ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:23
21 ತಿಳಿವುಗಳ ಹೋಲಿಕೆ  

ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.


ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಸಜ್ಜನರಿಗಾದರೋ ಒಳ್ಳೆಯದೇ ಆಗುತ್ತದೆ.


ಯೆಹೂದನು, “ಸ್ವಾಮಿ, ನಾವು ಹೇಳುವಂಥದ್ದು ಏನೂ ಇಲ್ಲ; ವಿವರಿಸಲು ಯಾವ ದಾರಿಯೂ ಇಲ್ಲ; ನಾವು ತಪ್ಪಿತಸ್ಥರಲ್ಲವೆಂದು ತೋರಿಸಲು ಯಾವ ಮಾರ್ಗವೂ ಇಲ್ಲ. ನಾವು ಮಾಡಿದ ಬೇರೊಂದು ಕಾರ್ಯದ ನಿಮಿತ್ತ ದೇವರು ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿದ್ದಾನೆ. ಆದ್ದರಿಂದ ನಾವೆಲ್ಲರೂ ಬೆನ್ಯಾಮೀನನೂ ನಿನಗೆ ಗುಲಾಮರಾಗಿರುವೆವು” ಎಂದು ಹೇಳಿದನು.


ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ. ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.


ಕೆಟ್ಟದ್ದನ್ನು ನಡೆಸುವ ಪ್ರತಿಯೊಬ್ಬ ವ್ಯಕ್ತಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಕಷ್ಟಸಂಕಟಗಳನ್ನು ಕೊಡುತ್ತಾನೆ.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಆ ಸುಳ್ಳುಗಾರರನ್ನು ಜೀವಂತವಾಗಿ ಉಳಿಸಬೇಡ. ಆ ಕೆಡುಕರಿಗೆ ಕೇಡುಗಳಾಗುವಂತೆ ಮಾಡು.


ನಾನು ನನ್ನನ್ನು ನಿನ್ನಿಂದ ಮರೆಮಾಡಿಕೊಳ್ಳಲು ಪ್ರಯತ್ನಿಸಿ, “ಹಗಲು ಹೋಗಿ ಕತ್ತಲಾಯಿತು, ಖಂಡಿತವಾಗಿ ಕಾರ್ಗತ್ತಲೆಯು ನನ್ನನ್ನು ಮರೆಮಾಡುವುದು” ಎಂದೆನ್ನಬಹುದು.


ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.


ಆಗ ಯೆಹೋಶುವನು ಆ ಕುಟುಂಬದ ಎಲ್ಲ ಗಂಡಸರನ್ನು ಯೆಹೋವನ ಮುಂದೆ ಬರಲು ಹೇಳಿದನು. ಯೆಹೋವನು ಆಗ ಕರ್ಮೀಯ ಮಗನಾದ ಆಕಾನನನ್ನು ಸೂಚಿಸಿದನು. ಕರ್ಮೀಯು ಜಬ್ದೀಯ ಮಗನಾಗಿದ್ದನು, ಜಬ್ದೀಯು ಜೆರಹನ ಮಗನಾಗಿದ್ದನು.


ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.


ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.


ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.


ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.


ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತವಾಗಿ ಆಶೀರ್ವದಿಸಲಿ” ಎಂದು ಹೇಳಿದನು.


ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು