ಅರಣ್ಯಕಾಂಡ 32:32 - ಪರಿಶುದ್ದ ಬೈಬಲ್32 ನಾವೇ ಯುದ್ಧ ಮಾಡುವ ಸೈನಿಕರಾಗಿ ನದಿಯನ್ನು ದಾಟಿ ಯೆಹೋವನ ಮುಂದೆ ಕಾನಾನ್ ದೇಶದೊಳಗೆ ಹೋಗುವೆವು. ಆದರೆ ನಮ್ಮ ಸ್ವಾಸ್ತ್ಯವಾದ ಭೂಮಿಯು ಜೋರ್ಡನ್ ನದಿಯ ಈಚೆಕಡೆಯಲ್ಲಿರುವುದು” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸರ್ವೇಶ್ವರನ ಸಮ್ಮುಖದಲ್ಲಿ ಯುದ್ಧ ಸನ್ನದ್ಧರಾಗಿ ಕಾನಾನ್ ನಾಡಿಗೆ ಹೊರಡುತ್ತೇವೆ. ಜೋರ್ಡನ್ ನದಿಯ ಈಚೆಯೇ ನಮಗೆ ಆಸ್ತಿ ದೊರಕಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಾವು ಯೇಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು; ಆಗ ಯೊರ್ದನ್ ಹೊಳೆಯ ಈಚೆಯೇ ನಮಗೆ ಸ್ವಾಸ್ತ್ಯವು ದೊರಕಬೇಕು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನಾವು ಯುದ್ಧಕ್ಕೆ ಸಿದ್ಧವಾಗಿ ಯೆಹೋವ ದೇವರ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು. ಆದರೆ ಯೊರ್ದನ್ ನದಿಯ ಈಚೆಯಲ್ಲಿರುವ ನಮ್ಮ ಸೊತ್ತಿನ ಭಾಗವೇ ನಮಗಿರಲಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
“ನಾವು ಗೆದ್ದುಕೊಂಡಿದ್ದ ಆ ದೇಶಗಳನ್ನು ನಮ್ಮದಾಗಿ ಮಾಡಿಕೊಂಡೆವು. ಇದರ ಒಂದು ಭಾಗವನ್ನು ನಾನು ರೂಬೇನ್ ಮತ್ತು ಗಾದ್ ಕುಲದವರಿಗೆ ಹಂಚಿಕೊಟ್ಟೆನು. ಅದು ಅರೋಯೇರ್‌ನಿಂದ ಹಿಡಿದು ಗಿಲ್ಯಾದ್ ಪ್ರದೇಶದವರೆಗೆ ಅಂದರೆ ಅರ್ನೋನ್ ಕಣಿವೆಯಲ್ಲಿರುವ ಅರೋಯೇರ್‌ನಿಂದ ಮೊದಲುಗೊಂಡು ಗಿಲ್ಯಾದ್ ಬೆಟ್ಟಪ್ರದೇಶದವರೆಗೂ ಅದರ ಎಲ್ಲಾ ಪಟ್ಟಣಗಳ ಸಮೇತವಾಗಿ ನಾನು ಕೊಟ್ಟೆನು. ಬೆಟ್ಟಪ್ರದೇಶವಾದ ಗಿಲ್ಯಾದಿನಲ್ಲಿ ಅರ್ಧಭಾಗ ಅವರಿಗೆ ದೊರೆಯಿತು.