Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:36 - ಪರಿಶುದ್ದ ಬೈಬಲ್‌

36 ಬೇತ್‌ಹಾರಾನ್ ಎಂಬ ಕೋಟೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು ಮತ್ತು ತಮ್ಮ ಪಶುಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಬೇತ್ ಹಾರನ್ ಎಂಬ ಸುತ್ತು ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ಆಡುಕುರಿಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಬೇತ್‍ಹಾರಾನ್ ಎಂಬ ಸುತ್ತು ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು; ತಮ್ಮ ಆಡುಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಬೇತ್ ನಿಮ್ರಾ ಮತ್ತು ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ, ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:36
4 ತಿಳಿವುಗಳ ಹೋಲಿಕೆ  

“ಯೆಹೋವನು ಇಸ್ರೇಲರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ, ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ಪಶುಗಳ ಮೇವಿಗೆ ಒಳ್ಳೆಯ ಸ್ಥಳವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ಪಶುಗಳು ಇವೆ.


ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,


ರೂಬೇನ್ ಕುಲದವರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಮತ್ತು ಸಿಬ್ಮಾ ಎಂಬ ಊರುಗಳನ್ನು ಕೋಟೆ ಸಮೇತವಾಗಿ ಕಟ್ಟಿದರು; ಅಲ್ಲದೆ ತಮ್ಮ ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿದರು. ಅವರು ತಾವು ಮತ್ತೆ ಕಟ್ಟಿದ ಊರುಗಳಿಗೆ ಅವುಗಳ ಮೊದಲಿನ ಹೆಸರುಗಳನ್ನು ಕೊಟ್ಟರು; ಆದರೆ ನೆಬೋ ಮತ್ತು ಬಾಳ್ಮೆಯೋನ್‌ಗಳ ಹೆಸರುಗಳನ್ನು ಬದಲಾಯಿಸಿದರು.


ಆ ಪ್ರದೇಶವು ಬೇತ್‌ಹಾರಾಮ್, ಬೇತ್‌ನಿಮ್ರಾ, ಸುಕ್ಕೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಈ ಪ್ರದೇಶವು ಜೋರ್ಡನ್ ನದಿಯ ಪೂರ್ವ ಭಾಗದಲ್ಲಿತ್ತು. ಈ ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು