Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:37 - ಪರಿಶುದ್ದ ಬೈಬಲ್‌

37-38 ರೂಬೇನ್ ಕುಲದವರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಮತ್ತು ಸಿಬ್ಮಾ ಎಂಬ ಊರುಗಳನ್ನು ಕೋಟೆ ಸಮೇತವಾಗಿ ಕಟ್ಟಿದರು; ಅಲ್ಲದೆ ತಮ್ಮ ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿದರು. ಅವರು ತಾವು ಮತ್ತೆ ಕಟ್ಟಿದ ಊರುಗಳಿಗೆ ಅವುಗಳ ಮೊದಲಿನ ಹೆಸರುಗಳನ್ನು ಕೊಟ್ಟರು; ಆದರೆ ನೆಬೋ ಮತ್ತು ಬಾಳ್ಮೆಯೋನ್‌ಗಳ ಹೆಸರುಗಳನ್ನು ಬದಲಾಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ರೂಬೇನ್ಯರು ಹೆಷ್ಬೋನ್, ಎಲೆಯಾಲೆ, ಕಿರ್ಯತಯಿಮ್, ಸಿಬ್ಮಾ ಎಂಬ ಊರುಗಳನ್ನು ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37-38 ರೂಬೇನ್ಯರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ಸಿಬ್ಮಾ ಎಂಬ ಊರುಗಳನ್ನೂ [ಬೇರೆ ಹೆಸರಿನಿಂದ ಉಚ್ಚರಿಸತಕ್ಕ] ನೆಬೋ, ಬಾಳ್ಮೆಯೋನ್ ಎಂಬಿವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ರೂಬೇನನ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:37
10 ತಿಳಿವುಗಳ ಹೋಲಿಕೆ  

“ಯೆಹೋವನು ಇಸ್ರೇಲರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ, ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ಪಶುಗಳ ಮೇವಿಗೆ ಒಳ್ಳೆಯ ಸ್ಥಳವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ಪಶುಗಳು ಇವೆ.


ಆದಕಾರಣ ಹಾಡುವವರು ಈ ಗೀತೆಯನ್ನು ಹಾಡುತ್ತಾರೆ: “ಹೆಷ್ಬೋನಿಗೆ, ಬಾ! ಮತ್ತೆ ಅದನ್ನು ನಿರ್ಮಿಸು! ಸೀಹೋನನ ಪಟ್ಟಣವನ್ನು ಮತ್ತೆ ಸ್ಥಾಪಿಸಿರಿ.


ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.


ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.


ಬೇತ್‌ಹಾರಾನ್ ಎಂಬ ಕೋಟೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು ಮತ್ತು ತಮ್ಮ ಪಶುಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು.


ಕಣಿವೆಯಲ್ಲಿರುವ ಪ್ರದೇಶ, ಬೆಟ್ಟದ ಮೇಲಿನ ಕಿರ್ಯಾತಯಿಮ್, ಸಿಬ್ಮಾ, ಚೆರೆತ್‌ಶಹರ್,


ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಬೋ ಪರ್ವತಕ್ಕೆ ದುರ್ಗತಿ ಬರುವುದು. ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು.


“ಹೆಷ್ಬೋನ್ ಮತ್ತು ಎಲೆಯಾಲೆ ಎಂಬ ಪಟ್ಟಣಗಳ ಜನರು ಅರಚಿಕೊಳ್ಳುತ್ತಿದ್ದಾರೆ. ಅವರ ಕಿರುಚಾಟವು ದೂರದ ಯಹಚಿನವರೆಗೂ ಕೇಳಿಬರುತ್ತಿದೆ. ಅವರ ಕಿರುಚಾಟವು ಚೋಯರಿನಿಂದ ದೂರದ ಹೊರೊನಯಿಮ್ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕೇಳಿಬರುತ್ತದೆ. ನಿಮ್ರೀಮ್ ಹಳ್ಳದ ನೀರು ಸಹ ಬತ್ತಿಹೋಗಿದೆ.


ಮೋವಾಬಿನ ಗಡಿಯನ್ನು ಸಂರಕ್ಷಿಸುತ್ತಿರುವ ಪಟ್ಟಣಗಳು ಆಕ್ರಮಣಕ್ಕೆ ಗುರಿಯಾಗುವಂತೆ ಮಾಡುತ್ತೇನೆ. ಬೇತ್‌ಯೆಷೀಮೋತ್, ಬಾಳ್‌ಮೆಯೋನ್, ಕಿರ್ಯಾಥಯಿಮ್, ಅದರ ವೈಭವಯುತವಾದ ಸರಹದ್ದಿನ ಪಟ್ಟಣಗಳನ್ನು ನಾನು ತೆಗೆದುಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು