Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:39 - ಪರಿಶುದ್ದ ಬೈಬಲ್‌

39 ಮಾಕೀರನ ವಂಶದವರು ಗಿಲ್ಯಾದಿಗೆ ಹೋದರು. (ಮಾಕೀರನು ಮನಸ್ಸೆಯ ಮಗ.) ಅವರು ಆ ಪಟ್ಟಣದಲ್ಲಿ ವಾಸಿಸುತ್ತಿದ್ದ ಅಮೋರಿಯರನ್ನು ಓಡಿಸಿ ಅದನ್ನು ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದ್‍ಗೆ ಹೋಗಿ ಅದನ್ನು ಸ್ವಾಧೀನ ಮಾಡಿಕೊಂಡರು. ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಮನಸ್ಸೆಯ ಮಗ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ, ಅದನ್ನು ತೆಗೆದುಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:39
7 ತಿಳಿವುಗಳ ಹೋಲಿಕೆ  

ಯೋಸೇಫನು ಜೀವದಿಂದಿದ್ದ ಕಾಲದಲ್ಲಿ, ಎಫ್ರಾಯೀಮನು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದನು. ಅವನ ಮಗನಾದ ಮನಸ್ಸೆಗೆ ಮಾಕೀರನೆಂಬ ಗಂಡುಮಗನು ಹುಟ್ಟಿದನು. ಯೋಸೇಫನು ಮಾಕೀರನ ಮಕ್ಕಳನ್ನೂ ನೋಡಿದನು.


ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.


ಮನಸ್ಸೆ ಕುಲದ ಕುಟುಂಬಗಳು: ಮಾಕೀರನ ಕುಟುಂಬದವರಾದ ಮಾಕೀರ್ಯರು; ಮಾಕೀರನ ಮಗನಾದ ಗಿಲ್ಯಾದನ ಕುಟುಂಬದವರಾದ ಗಿಲ್ಯಾದ್ಯರು.


“ಗಿಲ್ಯಾದ್ ಪ್ರಾಂತ್ಯವನ್ನು ನಾನು ಮಾಕೀರನಿಗೆ ಕೊಟ್ಟೆನು.


“ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.


ಅದೇ ವರ್ಷ ಅವರು ಜೋರ್ಡನ್ ನದಿಯ ಪೂರ್ವಕ್ಕಿರುವ ಗಿಲ್ಯಾದಿನಲ್ಲಿದ್ದ ಇಸ್ರೇಲರನ್ನು ನಾಶಮಾಡಿದರು. ಅದು ಮೊದಲು ಅಮೋರಿಯರ ಪ್ರದೇಶವಾಗಿತ್ತು. ಇಸ್ರೇಲರು ಹದಿನೆಂಟು ವರ್ಷಗಳವರೆಗೆ ಕಷ್ಟವನ್ನು ಅನುಭವಿಸಿದರು.


ಆಗ ಅವರು ಗಿಲ್ಯಾದಿಗೆ ಮತ್ತು ತಖ್ತೀಮ್ ಹೊಜೀ ಪ್ರದೇಶಕ್ಕೂ ಯಾನಿನದಾನಿಗೂ, ಚೀದೋನಿನ ಸುತ್ತಲೂ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು