ಅರಣ್ಯಕಾಂಡ 33:49 - ಪರಿಶುದ್ದ ಬೈಬಲ್49 ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‌ಯೆಷೀಮೋತಿನಿಂದ ಅಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‍ಯೆಷೀಮೋತಿನಿಂದ ಆಬೇಲ್‍ಶಿಟ್ಟೀವಿುನವರೆಗೂ ಯೊರ್ದನ್ ಹೊಳೆಯ ತೀರದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ ಯೆಷೀಮೋತಿನಿಂದ ಮೋವಾಬಿನ ಬಯಲುಗಳಲ್ಲಿರುವ ಆಬೇಲ್ ಶಿಟ್ಟೀಮಿನ ಪರ್ಯಂತರದವರೆಗೂ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |
ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”