ಅರಣ್ಯಕಾಂಡ 33:53 - ಪರಿಶುದ್ದ ಬೈಬಲ್53 ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿದ್ದೇನೆ. ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ನಾನು ಆ ನಾಡನ್ನು ನಿಮಗೆ ಸ್ವಂತ ನಾಡಾಗಲೆಂದು ಕೊಟ್ಟಿದ್ದೇನೆ. ಆದ್ದರಿಂದ ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲೇ ವಾಸಮಾಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ನಾನು ನಿಮಗೇ ಆ ದೇಶವನ್ನು ಸ್ವದೇಶವಾಗುವದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.