ಅರಣ್ಯಕಾಂಡ 33:54 - ಪರಿಶುದ್ದ ಬೈಬಲ್54 ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವ ಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಚೀಟು ಹಾಕಿ ಅದನ್ನು ನಿಮ್ಮ ನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಿ. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಆಸ್ತಿ ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಅಲ್ಲೇ ಆ ಕುಟುಂಬದ ಸೊತ್ತಿರಬೇಕು. ಒಂದೊಂದು ಕುಲಕ್ಕೆ ಸೇರಿದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |