Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:55 - ಪರಿಶುದ್ದ ಬೈಬಲ್‌

55 “ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ನೀವು ಆ ನಾಡಿನ ನಿವಾಸಿಗಳನ್ನು ಹೊರಡಿಸದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆ ಆಗುವರು; ಪಕ್ಕೆ ತಿವಿಯುವ ಶೂಲಗಳಂತೆ ಆಗುವರು; ನೀವು ವಾಸಿಸುವ ನಾಡಿನಲ್ಲಿ ನಿಮಗೆ ಕಂಠಕಪ್ರಾಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ ಪಕ್ಕೆ ತಿವಿಯುವ ಶೂಲಗಳಂತೆಯೂ ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 “ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:55
11 ತಿಳಿವುಗಳ ಹೋಲಿಕೆ  

“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಈ ಜನರನ್ನು ಬಲವಂತ ಮಾಡುವುದಿಲ್ಲ. ಈ ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳುದೇವರುಗಳು ನಿಮಗೆ ಬಲೆಯಂತೆ ಉರುಲಾಗುತ್ತವೆ.’”


ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.


ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.


ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರುಲಾಗುವುದು.”


“‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”


ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.


ಅದಲ್ಲದೆ, ನಾನು ಅವರಿಗೆ ಏನನ್ನು ಮಾಡಲು ಯೋಚಿಸಿದೆನೋ ಅದನ್ನು ನಿಮಗೆ ಮಾಡುವೆನು.”


ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು