Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:13 - ಪರಿಶುದ್ದ ಬೈಬಲ್‌

13 ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ. ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕನುಸಾರವಾಗಿ ಮೋಶೆ ಇಸ್ರಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ ನಾಡು ಇದೇ. ಒಂಬತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೆಲ್ಯರಿಗೆ - ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ; ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:13
10 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.


ಬಳಿಕ ಈ ಮೇರೆಯು ಜೋರ್ಡನ್ ನದಿಯ ಉದ್ದಕ್ಕೂ ಮುಂದುವರೆಯುವುದು. ಅದು ಉಪ್ಪು ಸಮುದ್ರದಲ್ಲಿ ಕೊನೆಗೊಳ್ಳುವುದು. ಇವುಗಳೇ ನಿಮ್ಮ ದೇಶದ ಸುತ್ತಲಿನ ಮೇರೆಗಳು.”


ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.


“ನೀನು ಚೀಟುಹಾಕಿ ಇಸ್ರೇಲರ ಕುಲಗಳಿಗನುಸಾರವಾಗಿ ದೇಶವನ್ನು ವಿಂಗಡಿಸಬೇಕು. ಆ ಸಮಯದಲ್ಲಿ ಒಂದು ಭಾಗವನ್ನು ಪ್ರತ್ಯೇಕಿಸಿಡಬೇಕು. ಅದು ಯೆಹೋವನಿಗೋಸ್ಕರ ಮೀಸಲಾಗಿಡಲ್ಪಟ್ಟದ್ದು. ಆ ಪ್ರದೇಶವು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಹತ್ತು ಸಾವಿರ ಮೊಳ ಅಗಲವಿರುವದು. ಈ ಎಲ್ಲಾ ಜಾಗವು ಪರಿಶುದ್ಧವಾದದ್ದು.


ಈಗ ನಾವು ನಮ್ಮ ದೇಶವನ್ನು ಅಳತೆಮಾಡಿ ದೇವಜನರಿಗೆ ಹಂಚಲು ಆಗುವದಿಲ್ಲ.’”


ಒಂಭತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲು ಮಾಡಿಕೊಡು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು