Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:19 - ಪರಿಶುದ್ದ ಬೈಬಲ್‌

19 ಪ್ರತಿಯೊಂದು ಕುಲದಿಂದ ನೀವು ನೇಮಿಸಬೇಕಾದವರು ಇವರೇ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಆಯಾ ಕುಲಗಳಿಂದ ನೇಮಿಸಬೇಕಾದವರು ಯಾರೆಂದರೆ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಯಾ ಕುಲದಿಂದ ನೀವು ನೇಮಿಸಬೇಕಾದವರು ಇವರು: ಯೆಹೂದ ಕುಲದಿಂದ ಯೆಫುನ್ನೆಯ ಮಗ ಕಾಲೇಬ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಆಯಾ ಕುಲಗಳಿಂದ ನೇವಿುಸಬೇಕಾದವರು ಯಾರಂದರೆ - ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಈ ಜನರ ಹೆಸರುಗಳು ಇವೇ. “ಯೆಹೂದನ ಕುಟುಂಬದಿಂದ ಯೆಫುನ್ನೆಯ ಮಗ ಕಾಲೇಬನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:19
15 ತಿಳಿವುಗಳ ಹೋಲಿಕೆ  

ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗೊಣಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.


ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಯೆಹೋವನೇ, ಯೆಹೂದದ ನಾಯಕನು ಸಹಾಯಕ್ಕಾಗಿ ಮೊರೆಯಿಡುವಾಗ ಅದನ್ನು ಆಲಿಸಿ ಅವನ ಜನರ ಬಳಿಗೆ ಕರೆದುಕೊಂಡು ಬಂದು ಅವರೊಂದಿಗೆ ಸೇರಿಸು. ಅವನನ್ನು ಬಲಗೊಳಿಸಿ ಶತ್ರುಗಳೊಂದಿಗೆ ಯುದ್ಧಮಾಡಲು ಸಹಾಯಿಸು.”


ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನ ಹೊರತು ಉಳಿದ ಹತ್ತು ಮಂದಿ ಸತ್ತರು. ಯೆಹೋವನು ಅವರಿಬ್ಬರನ್ನು ಉಳಿಸಿದನು. ಅವರಿಗೆ ವ್ಯಾಧಿಯು ತಗಲಲಿಲ್ಲ.


ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆ ಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ.


ಆದರೆ ನನ್ನ ಸೇವಕನಾದ ಕಾಲೇಬನು ಅವರ ಹಾಗಲ್ಲ, ಅವನು ನನ್ನನ್ನು ಮನಃಪೂರ್ವಕವಾಗಿ ಹಿಂಬಾಲಿಸಿದ್ದಾನೆ. ಆದ್ದರಿಂದ ಅವನು ಸಂಚರಿಸಿ ನೋಡಿದ ದೇಶಕ್ಕೆ ಅವನನ್ನು ಬರಮಾಡುವೆನು ಮತ್ತು ಅವನ ಸಂತತಿಯವರು ಆ ದೇಶವನ್ನು ಹೊಂದುವರು.


ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬಂದವರಲ್ಲಿ ಇಬ್ಬರಾಗಿದ್ದರು. ಅವರು ಬೇಸರಗೊಂಡು ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ನಂತರ ಲೇಯಾ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವನನ್ನು ಸ್ತುತಿಸುವೆನು” ಎಂದು ಹೇಳಿ ಆ ಮಗುವಿಗೆ ಯೆಹೂದ ಎಂದು ಹೆಸರಿಟ್ಟಳು. ನಂತರ ಲೇಯಳಿಗೆ ಮಕ್ಕಳಾಗುವುದು ನಿಂತುಹೋಯಿತು.


ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,


ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲಪ್ರಧಾನ.


ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಆ ದೇಶವನ್ನು ನೋಡುವನು. ಕಾಲೇಬನು ಸಂಚರಿಸಿದ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನು. ಯಾಕೆಂದರೆ ನಾನು ಆಜ್ಞಾಪಿಸಿದ್ದನ್ನೆಲ್ಲ ಕಾಲೇಬನು ಮಾಡಿದನು’ ಎಂದು ಪ್ರಮಾಣಮಾಡಿದನು.


ಗಿಲ್ಯಾದ್ ಮತ್ತು ಮನಸ್ಸೆ ನನ್ನವೇ. ಎಫ್ರಾಯೀಮ್ ನನ್ನ ಶಿರಸ್ತ್ರಾಣ. ಯೆಹೂದ ನನ್ನ ರಾಜದಂಡ.


ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.


ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ಆ ನಾಯಕರು ಯಾರೆಂದರೆ: ರೂಬೇನ್ ಕುಲದಿಂದ ಜಕ್ಕೂರನ ಮಗನಾದ ಶಮ್ಮೂವ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು