Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:6 - ಪರಿಶುದ್ದ ಬೈಬಲ್‌

6 ಪಶ್ಚಿಮದಿಕ್ಕಿನಲ್ಲಿ ಮೆಡಿಟೆರೇನಿಯನ್ ಸಮುದ್ರದ ತೀರ ನಿಮ್ಮ ದೇಶದ ಮೇರೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ದೇಶದ ಮೇರೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ನಾಡಿನ ಮೇರೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪಶ್ಚಿಮದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ದೇಶದ ಮೇರೆಯಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪಶ್ಚಿಮದಲ್ಲಿ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು. ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:6
12 ತಿಳಿವುಗಳ ಹೋಲಿಕೆ  

“ಪಶ್ಚಿಮದಲ್ಲಿ ಲೆಬೊಹಮಾತ್ ಎಂಬ ಸ್ಥಳದ ಮುಂಭಾಗದಲ್ಲಿರುವ ಸಮುದ್ರ ತೀರವೇ ಪಶ್ಚಿಮ ದಿಕ್ಕಿನ ಮೇರೆಯಾಗಿರುತ್ತದೆ.


“ದೇಶದ ಮೇರೆ ಯಾವದೆಂದರೆ, ಉತ್ತರದ ಮೇರೆಯು ಭೂಮಧ್ಯ ಸಮುದ್ರದಲ್ಲಿ ಪ್ರಾರಂಭವಾಗಿ ಹೆತ್ಲೋನ್ ಕಡೆಗೂ ಅಲ್ಲಿಂದ ಚೆದಾದ್ ಕಡೆಗೂ


ಎಂಗೇದಿಯಿಂದ ಪ್ರಾರಂಭವಾಗಿ ಏನ್‌ಎಗ್ಲಯಿಮ್ ತನಕ ಬೆಸ್ತರು ಹೊಳೆಯ ದಡದಲ್ಲಿ ನಿಂತಿರುವದನ್ನು ನೀನು ನೋಡಬಹುದು. ಅವರು ತಮ್ಮ ಬಲೆಗಳನ್ನು ಬೀಸಿ ನಾನಾ ತರದ ಮೀನುಗಳನ್ನು ಹಿಡಿಯುವದನ್ನು ನೀನು ನೋಡಬಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಈ ಹೊಳೆಯಲ್ಲಿಯೂ ಇವೆ.


ಪಶ್ಚಿಮದಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ಮತ್ತು ಜೋರ್ಡನ್ ನದಿಯ ಮಧ್ಯದ ಪ್ರದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳಬಹುದೆಂದು ನಾನು ನಿಮಗೆ ತಿಳಿಸಿದ್ದನ್ನು ಸ್ಮರಿಸಿಕೊಳ್ಳಿ. ನಾನು ಆ ಪ್ರದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಅದು ನಿಮ್ಮ ಅಧೀನಕ್ಕೆ ಬಂದಿಲ್ಲ.


ಅಷ್ಡೋದಿನ ಸುತ್ತಮುತ್ತಲಿನ ಎಲ್ಲ ಕ್ಷೇತ್ರ ಮತ್ತು ಅಲ್ಲಿಯ ಸಣ್ಣ ಊರುಗಳು ಯೆಹೂದ ಪ್ರದೇಶದ ಭಾಗವಾಗಿದ್ದವು. ಯೆಹೂದದ ಜನರು ಗಾಜಾದ ಸುತ್ತಮುತ್ತಲಿನ ಕ್ಷೇತ್ರ ಮತ್ತು ಹತ್ತಿರದ ಊರುಕೇರಿಗಳನ್ನೂ ಹೊಲಗದ್ದೆಗಳನ್ನೂ ಪಡೆದುಕೊಂಡರು. ಅವರ ನೆಲವು ಈಜಿಪ್ಟಿನ ನದಿಯವರೆಗೂ ವಿಸ್ತರಿಸಿತ್ತು; ಮೆಡಿಟರೆನಿಯನ್ ಸಮುದ್ರದ ತೀರದುದ್ದಕ್ಕೂ ಚಾಚಿತ್ತು.


ಮೆಡಿಟರೆನಿಯನ್ ಸಮುದ್ರತೀರವೇ ಯೆಹೂದ್ಯರ ಸ್ವಾಸ್ತ್ಯದ ಪಶ್ಚಿಮ ಸೀಮೆಯಾಗಿತ್ತು. ಹೀಗೆ ಯೆಹೂದ್ಯರ ಸ್ವಾಸ್ತ್ಯವು ಈ ನಾಲ್ಕು ಸೀಮೆಯ ಒಳಗಡೆ ಇತ್ತು. ಯೆಹೂದ್ಯರ ಗೋತ್ರಗಳು ಈ ಪ್ರದೇಶದಲ್ಲಿದ್ದವು.


ಜೋರ್ಡನ್ ನದಿಯ ಪಶ್ಚಿಮದ ಎಲ್ಲ ಅರಸರು ಈ ವಿಷಯಗಳ ಬಗ್ಗೆ ಕೇಳಿದರು. ಇವರು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ರಾಜರಾಗಿದ್ದರು. ಅವರು ಬೆಟ್ಟಪ್ರದೇಶಗಳಲ್ಲಿ ಮತ್ತು ಸಮತಲ ಪ್ರದೇಶಗಳಲ್ಲಿ ವಾಸವಾಗಿದ್ದರು. ಅವರು ಭೂಮಧ್ಯಸಾಗರದ ತೀರ ಪ್ರದೇಶದಲ್ಲಿ, ಲೆಬನೋನಿನವರೆಗೆ ಸಹ ವಾಸವಾಗಿದ್ದರು.


ಅರಣ್ಯ ಮತ್ತು ಲೆಬನೋನ್ ಪರ್ವತ ಇವುಗಳನ್ನು ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ಪ್ರದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಪ್ರದೇಶವು ಪಶ್ಚಿಮದಲ್ಲಿನ ಮೆಡಿಟರೇನಿಯನ್ ಸಮುದ್ರದವರೆಗೆ ವಿಸ್ತರಿಸಿಕೊಳ್ಳುವುದು.


ಗಡಿಯು ಅಚ್ಮೋನಿನಿಂದ ಈಜಿಪ್ಟಿನ ನದಿಯ ಕಡೆಗೆ ತಿರುಗಿಕೊಂಡು ಸಮುದ್ರವನ್ನು ಸೇರುವುದು.


ಉತ್ತರದಿಕ್ಕಿನ ಮೇರೆ ಮೆಡಿಟೆರೇನಿಯನ್ ಸಮುದ್ರದಿಂದ ಹಿಡಿದು ಲೆಬನೋನಿನಲ್ಲಿರುವ ಹೋರ್ ಬೆಟ್ಟದವರೆಗೂ ಇರುವುದು.


ಮೋಶೆಗೆ ಯೆಹೋವನು ನಫ್ತಾಲಿ, ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳನ್ನು ತೋರಿಸಿದನು. ಯೆಹೂದ ಪ್ರಾಂತ್ಯವನ್ನು ಮೆಡಿಟರೇನಿಯನ್ ಸಮುದ್ರದವರೆಗೂ ತೋರಿಸಿದನು.


ಅಲ್ಲಿಂದ ಆ ಗಡಿಯು ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಅಲ್ಲಿಂದ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡವನ್ನು ತಲುಪುತ್ತದೆ. ಆ ಗಡಿಯು ಯಬ್ನೇಲಿನವರೆಗೆ ಮುಂದುವರೆದು ನಂತರ ಮೆಡಿಟರೆನಿಯನ್ ಸಮುದ್ರ ತೀರದಲ್ಲಿ ಮುಗಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು