Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:8 - ಪರಿಶುದ್ದ ಬೈಬಲ್‌

8 ಹೋರ್ ಬೆಟ್ಟದಿಂದ ಅದು ಲೆಬೊಹಮಾತಿಗೆ ಹೋಗಿ ಅಲ್ಲಿಂದ ಚೆದಾದಿಗೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:8
12 ತಿಳಿವುಗಳ ಹೋಲಿಕೆ  

ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ, ಚಿನ್ ಮರುಭೂಮಿಯಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿಕೊಂಡರು.


ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.


ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.


ಹದದೆಜೆರನ ಸೈನ್ಯವನ್ನೆಲ್ಲ ದಾವೀದನು ಸೋಲಿಸಿದನೆಂಬ ವರ್ತಮಾನವು ಹಮಾತಿನ ರಾಜನಾದ ತೋವಿಗೆ ತಿಳಿಯಿತು.


ಬಳಿಕ ಆ ಮೇರೆಯು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯುವುದು. ಹೀಗೆ ಅದು ನಿಮ್ಮ ಉತ್ತರ ಮೇರೆಯಾಗಿರುವುದು.


ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!


ಕಲ್ನೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯಪಟ್ಟಣವು ದಮಸ್ಕದಂತಿರುವದು.


“ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ.


ಅರ್ವಾದಿಯರಿಗೆ, ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಕಾನಾನನು ಮೂಲಪಿತೃವಾಗಿದ್ದನು.


ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು