ಅರಣ್ಯಕಾಂಡ 35:19 - ಪರಿಶುದ್ದ ಬೈಬಲ್19 ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನರಹತ್ಯ ಮಾಡಿದವನನ್ನು ಕಂಡೊಡನೆ ಕೊಲ್ಲಬೇಕಾದವನು ಹತನಾದವನ ಸಮೀಪ ಬಂಧುವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನರಹತ್ಯಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರಂದರೆ ಹತವಾದವನ ಸಮೀಪಬಂಧುವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು. ಅಧ್ಯಾಯವನ್ನು ನೋಡಿ |
ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.
ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.