ಅರಣ್ಯಕಾಂಡ 35:2 - ಪರಿಶುದ್ದ ಬೈಬಲ್2 “ಇಸ್ರೇಲರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿರುವ ಭೂಮಿಯನ್ನೂ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಇಸ್ರಯೇಲರು ತಾವು ಹೊಂದುವ ಸೊತ್ತಿನಲ್ಲಿ ಕೆಲವು ಊರುಗಳನ್ನು ಹಾಗು ಆ ಊರಿನ ಸುತ್ತಲಿನ ಭೂಮಿಯನ್ನು ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿನ ಭೂವಿುಯನ್ನೂ ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿಯರಿಗೆ ವಾಸಮಾಡುವುದಕ್ಕೆ ಕೆಲವು ಪಟ್ಟಣಗಳನ್ನು ಕೊಡಬೇಕು. ಪಟ್ಟಣಗಳ ಸುತ್ತಮುತ್ತಲಿರುವ ಹುಲ್ಲುಗಾವಲು ಪ್ರದೇಶಗಳನ್ನು ನೀವು ಲೇವಿಯರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿ |
“ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ಧಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು.
ಆರೋನನ ಸಂತತಿಯ ಕೆಲವು ಯಾಜಕರಿಗೆ ಲೇವಿಯರು ವಾಸಿಸುತ್ತಿದ್ದ ಪಟ್ಟಣಗಳ ಹತ್ತಿರ ಹೊಲಗಳಿದ್ದವು. ಆರೋನನ ಸಂತತಿಯವರಲ್ಲಿ ಕೆಲವರು ಲೇವಿಯರ ಪಟ್ಟಣಗಳಲ್ಲಿಯೂ ವಾಸಮಾಡುತ್ತಿದ್ದರು. ಈ ಆರೋನನ ಸಂತತಿಯವರಿಗೆ ಪಾಲು ಕೊಡಲು ಕೆಲವರನ್ನು ನೇಮಿಸಲಾಯಿತು. ಗಂಡಸರಿಗೆ ಮತ್ತು ವಂಶಾವಳಿಯಲ್ಲಿ ಹೆಸರನ್ನು ಹೊಂದಿದ್ದ ಎಲ್ಲಾ ಲೇವಿಯರಿಗೆ ಸಂಗ್ರಹಿಸಲ್ಪಟ್ಟಿದ್ದರಲ್ಲಿ ಅವರವರ ಪಾಲು ದೊರೆಯಿತು.
ಆಮೇಲೆ ಇಸ್ರೇಲ್ ಜನರನ್ನು ಕರೆದು ಅವರಿಗೆ ಹೀಗೆಂದನು: “ಇದು ನಿಮಗೆ ಒಳ್ಳೆಯ ಆಲೋಚನೆ ಎನಿಸಿದರೆ ಮತ್ತು ಇದು ಯೆಹೋವನ ಚಿತ್ತಕ್ಕನುಸಾರವಾಗಿದ್ದರೆ, ಇಸ್ರೇಲಿನ ಎಲ್ಲಾ ಸ್ಥಳಗಳಲ್ಲಿರುವ ನಮ್ಮ ಸಹೋದರರಿಗೆ ಒಂದು ಸಂದೇಶವನ್ನು ಕಳುಹಿಸೋಣ. ನಮ್ಮ ಸಹೋದರರೊಂದಿಗೆ ಊರುಗಳಲ್ಲಿಯೂ ಊರುಗಳ ಸಮೀಪದಲ್ಲಿರುವ ಹೊಲಗಳಲ್ಲಿಯೂ ವಾಸವಾಗಿರುವ ಯಾಜಕರಿಗೂ ಲೇವಿಯರಿಗೂ ಈ ಸಂದೇಶವನ್ನು ಕಳುಹಿಸಿಕೊಡೋಣ: ನೀವು ಬಂದು ನಮ್ಮೊಂದಿಗೆ ಸೇರಿಕೊಳ್ಳಿ.