ಅರಣ್ಯಕಾಂಡ 35:25 - ಪರಿಶುದ್ದ ಬೈಬಲ್25 ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರಿಗಿ ಸೇರಿಸಬೇಕು. ಪಟ್ಟಾಭಿಷೇಕಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸುವವನ ಕೈಯಿಂದ ತಪ್ಪಿಸಿ, ಅವನು ಓಡಿ ಹೋದ ಆಶ್ರಯದ ಪಟ್ಟಣಕ್ಕೆ ತಿರುಗಿ ಸೇರಿಸಬೇಕು. ಅಲ್ಲೇ ಅವನು ಪರಿಶುದ್ಧ ಎಣ್ಣೆಯಿಂದ ಅಭಿಷೇಕ ಹೊಂದಿದ ಮಹಾಯಾಜಕನು ಸಾಯುವವರೆಗೂ ವಾಸಮಾಡಲಿ. ಅಧ್ಯಾಯವನ್ನು ನೋಡಿ |
“ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.