ಅರಣ್ಯಕಾಂಡ 35:29 - ಪರಿಶುದ್ದ ಬೈಬಲ್29 ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಕಟ್ಟಳೆಗೆ ಅನುಸಾರವಾಗಿ ನ್ಯಾಯತೀರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನೀವು ಮತ್ತು ನಿಮ್ಮ ಸಂತತಿಯವರು ಈ ವಿಧಿನಿಯಮಗಳಿಗನುಸಾರ ನಿಮ್ಮ ನಿವಾಸಗಳಲ್ಲೆಲ್ಲ ನ್ಯಾಯ ತೀರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ ‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು. ಅಧ್ಯಾಯವನ್ನು ನೋಡಿ |
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.