ಅರಣ್ಯಕಾಂಡ 35:3 - ಪರಿಶುದ್ದ ಬೈಬಲ್3 ಅವರು ಆ ಪಟ್ಟಣಗಳಲ್ಲಿ ವಾಸಿಸುವರು. ಆ ಊರುಗಳು ಲೇವಿಯರ ನಿವಾಸಕ್ಕಾಗಿ, ಸುತ್ತಲಿರುವ ಭೂಮಿಗಳು ಅವರ ಪಶುಗಳಿಗಾಗಿ ಮತ್ತು ಇತರ ಪ್ರಾಣಿಗಳಿಗಾಗಿ ಇರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಪಟ್ಟಣಗಳು ಲೇವಿಯರ ವಾಸ ಸ್ಥಳವಾಗುವುದು. ಸುತ್ತಲಿರುವ ಭೂಮಿಗಳು ಅವರ ದನಕುರಿಗಳಿಗಾಗಿಯೂ ಮತ್ತು ಪಶುಗಳಿಗಾಗಿಯೂ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಊರುಗಳು ಲೇವಿಯರ ನಿವಾಸಕ್ಕೆ ಆಗುವುದು; ಅವುಗಳ ಸುತ್ತಲಿನ ಭೂಮಿಗಳು ಅವರ ದನಕುರಿ, ಪ್ರಾಣಿಪಶುಗಳ ಪ್ರಯೋಜನಕ್ಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಊರುಗಳು ಲೇವಿಯರ ನಿವಾಸಕ್ಕಾಗಿ, ಸುತ್ತಲಿರುವ ಭೂವಿುಗಳು ಅವರ ದನ ಕುರಿ ಮೊದಲಾದ ಪಶುಗಳಿಗಾಗಿಯೂ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಂತರ ಅವರು ವಾಸಮಾಡುವದಕ್ಕೆ ಪಟ್ಟಣಗಳು, ಅವರು ಹೊಂದಿರುವ ಪಶುಗಳಿಗೋಸ್ಕರವೂ ಮತ್ತು ಅವರ ಎಲ್ಲಾ ಇತರ ಪ್ರಾಣಿಗಳಿಗೂ ಹುಲ್ಲುಗಾವಲು ಪ್ರದೇಶಗಳನ್ನು ಹೊಂದಿರುತ್ತಾರೆ. ಅಧ್ಯಾಯವನ್ನು ನೋಡಿ |
“ಪ್ರತಿಯೊಬ್ಬ ಲೇವಿಯನಿಗೂ ದೇವಾಲಯದಲ್ಲಿ ಸೇವೆಮಾಡಲು ಒಂದು ನಿರ್ಧಿಷ್ಟ ಸಮಯವನ್ನು ಗೊತ್ತುಪಡಿಸಲಾಗಿದೆ. ಆದರೆ ಬೇರೆ ಸಮಯದಲ್ಲಿಯೂ ಸಹ ಅವನು ಅಲ್ಲಿ ಸೇವೆಮಾಡಲು ಇಷ್ಟಪಟ್ಟರೆ, ಅವನು ತನಗೆ ಇಷ್ಟಬಂದ ಸಮಯದಲ್ಲಿ ಸೇವೆ ಮಾಡಬಹುದು. ಇಸ್ರೇಲಿನ ಯಾವದೇ ಭಾಗದಲ್ಲಿರುವ ಯಾವುದೇ ಊರಿನಲ್ಲಿರುವ ಲೇವಿಯನು ತನ್ನ ಸ್ವಂತ ಸ್ಥಳವನ್ನು ಬಿಟ್ಟು ಯೆಹೋವನ ವಿಶೇಷ ಸ್ಥಳಕ್ಕೆ ಬರಬಹುದು. ಅವನು ತನಗೆ ಇಷ್ಟಬಂದ ಯಾವುದೇ ಸಮಯದಲ್ಲಿ ಬೇಕಾದರೂ ಹೀಗೆ ಮಾಡಬಹುದು.