Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:30 - ಪರಿಶುದ್ದ ಬೈಬಲ್‌

30 “ಯಾವನಾದರೂ ಮತ್ತೊಬ್ಬನನ್ನು ಕೊಂದರೆ, ಸಾಕ್ಷ್ಯಾಧಾರಗಳು ಇದ್ದರೆ ಮಾತ್ರ ಕೊಂದವನು ಕೊಲ್ಲಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ಒಬ್ಬನು ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆ ವಿಧಿಸಬೇಕು. ಒಬ್ಬನೇ ಒಬ್ಬ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಒಬ್ಬನ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ ‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:30
14 ತಿಳಿವುಗಳ ಹೋಲಿಕೆ  

ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.


ಆದರೆ ಅವನು ನಿನ್ನ ಮಾತನ್ನು ಕೇಳದಿದ್ದರೆ, ನಿನ್ನೊಂದಿಗೆ ಒಬ್ಬಿಬ್ಬರನ್ನು ಕರೆದುಕೊಂಡು ಮತ್ತೆ ಅವನ ಬಳಿಗೆ ಹೋಗು. ಆಗ ಪ್ರತಿಯೊಂದು ದೂರಿನ ವಿಷಯದಲ್ಲೂ ಇಬ್ಬರು ಅಥವಾ ಮೂವರು ಸಾಕ್ಷಿಗಳಿರುವರು.


“ಒಬ್ಬನು ಕಟ್ಟಳೆಗಳಿಗೆ ವಿರುದ್ಧವಾಗಿ ನಡೆದುಕೊಂಡು ಅಪಾದಿಸಲ್ಪಟ್ಟದ್ದಲ್ಲಿ ಒಬ್ಬನ ಸಾಕ್ಷಿಯಿಂದ ಅವನು ತಪ್ಪಿತಸ್ಥನೆಂದು ತೀರ್ಮಾನಿಸಬಾರದು. ಅವನು ತಪ್ಪಿತಸ್ಥನೆಂದು ತೋರಿಸಲು ಎರಡು ಅಥವಾ ಮೂರು ಸಾಕ್ಷಿಗಳಿರಬೇಕು.


ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.


ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು.


“ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನನ್ನು ಕೊಲೆಗಾರನೆಂದು ನೀವು ತೀರ್ಮಾನಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.


“ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನೂ ಕೊಲ್ಲಲ್ಪಡಬೇಕು.


“ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು.


“ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.


“ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು