Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:31 - ಪರಿಶುದ್ದ ಬೈಬಲ್‌

31 “ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮರಣಶಿಕ್ಷೆಗೆ ಪಾತ್ರನಾದ ಕೊಲೆಗಡುಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆ ಆಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವದಕ್ಕೆ ಈಡನ್ನು ತೆಗೆದುಕೊಳ್ಳಕೂಡದು; ಅವನಿಗೆ ಮರಣಶಿಕ್ಷೆಯೇ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:31
13 ತಿಳಿವುಗಳ ಹೋಲಿಕೆ  

ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು!


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.


ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


“ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು.


ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ನರಹತ್ಯ ಮಾಡಿದವನಾಗಿದ್ದಾನೆ. ಅವನಿಗೆ ಮರಣಶಿಕ್ಷೆಯಾಗಬೇಕು.


“ಯಾವನಾದರೂ ಮತ್ತೊಬ್ಬನನ್ನು ಕೊಂದರೆ, ಸಾಕ್ಷ್ಯಾಧಾರಗಳು ಇದ್ದರೆ ಮಾತ್ರ ಕೊಂದವನು ಕೊಲ್ಲಲ್ಪಡಬೇಕು.


“ಆಶ್ರಯನಗರಕ್ಕೆ ಓಡಿಹೋದವನಿಂದ ಹಣವನ್ನು ಈಡಾಗಿ ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ತನ್ನ ಸ್ವಂತ ಸ್ಥಳಕ್ಕೆ ಹೋಗಿ ವಾಸಿಸಲು ನೀವು ಅವಕಾಶ ಕೊಡಕೂಡದು.


“ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಗಿಬ್ಯೋನ್ಯರು ದಾವೀದನಿಗೆ, “ಸೌಲನ ಬೆಳ್ಳಿಬಂಗಾರವಾಗಲಿ ಅವನ ಮನೆಯಾಗಲಿ ನಮಗೆ ಬೇಕಾಗಿಲ್ಲ ಮತ್ತು ಇಸ್ರೇಲಿನ ಯಾವ ವ್ಯಕ್ತಿಯನ್ನೂ ಕೊಲ್ಲಲು ನಮಗೆ ಹಕ್ಕಿಲ್ಲ” ಎಂದು ಹೇಳಿದರು. ದಾವೀದನು, “ಆದರೆ ನಿಮಗಾಗಿ ನಾನು ಏನು ಮಾಡಲಿ?” ಎಂದನು.


ಬಳಿಕ, ಕೊಲೆಗಾರ್ತಿಯರೂ ವ್ಯಭಿಚಾರಿಣಿಯರೂ ಶಿಕ್ಷಿಸಲ್ಪಡುವಂತೆ ನಾನು ನಿನ್ನನ್ನು ದಂಡಿಸುವೆನು. ನನ್ನ ಭಯಂಕರವಾದ ಕೋಪದಿಂದ ನಿನಗೆ ಮರಣದಂಡನೆಯನ್ನು ವಿಧಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು