ಅರಣ್ಯಕಾಂಡ 35:33 - ಪರಿಶುದ್ದ ಬೈಬಲ್33 “ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 “‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 “ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವದಷ್ಟೆ. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ. ಅಧ್ಯಾಯವನ್ನು ನೋಡಿ |
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”