ಅರಣ್ಯಕಾಂಡ 35:34 - ಪರಿಶುದ್ದ ಬೈಬಲ್34 ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನೀವು ವಾಸಮಾಡುವ ನಾಡನ್ನು ಅಪವಿತ್ರ ಮಾಡಬೇಡಿ. ಸರ್ವೇಶ್ವರನೆಂಬ ನಾನೇ ಇಸ್ರಯೇಲರ ನಡುವೆ ಆ ನಾಡಿನಲ್ಲಿ ವಾಸಿಸುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು; ಯೆಹೋವನೆಂಬ ನಾನೇ ಇಸ್ರಾಯೇಲ್ಯರ ನಡುವೆ ಆ ದೇಶದಲ್ಲಿ ವಾಸಿಸುತ್ತೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”