Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:15 - ಪರಿಶುದ್ದ ಬೈಬಲ್‌

15 “ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:15
26 ತಿಳಿವುಗಳ ಹೋಲಿಕೆ  

ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲಿ ಬಂಡಿಗಳನ್ನಾಗಲಿ ಕೊಡಲಿಲ್ಲ. ಯಾಕೆಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಈ ಕೆಲಸವು ಕೊಡಲ್ಪಟ್ಟಿತು.


ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.


ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.


“ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು.


ಆದರೆ ಯಾಜಕರಿಲ್ಲದ ಕಾರಣ ಬೇತ್‌ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಿಕಿ ನೋಡಿದ್ದರಿಂದ ಬೇತ್‌ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್‌ಷೆಮೆಷಿನ ಜನರು ಗೋಳಾಡಿ,


ಮೋಶೆಯು ಆಜ್ಞಾಪಿಸಿದ್ದ ಪ್ರಕಾರವೇ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಬೇಕಾದ ಕೋಲುಗಳನ್ನು ಲೇವಿಯರು ಸಿದ್ಧಪಡಿಸಿದರು. ಯೆಹೋವನು ಹೇಳಿದಂತೆಯೇ ಅವರು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋದರು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಞವಾಗಿ ಅರ್ಪಿಸಿದನು.


ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ. ಯೆಹೋವನ ಅಪ್ಪಣೆಗಳನ್ನೆಲ್ಲ ಅವರು ಕೈಗೊಳ್ಳುವವರೆಗೆ ಪವಿತ್ರ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ಮಧ್ಯದಲ್ಲಿ ನಿಂತುಕೊಂಡೇ ಇದ್ದರು. ಜನರು ತ್ವರಿತಗತಿಯಿಂದ ನದಿಯನ್ನು ದಾಟಿದರು.


ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರ ಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರೆಲ್ಲರಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.


ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.


ಆದರೆ ಬೆಟ್ಟದಿಂದ ದೂರವಿರಬೇಕೆಂದು ನೀನು ಜನರಿಗೆ ಹೇಳಬೇಕು. ಒಂದು ಗೆರೆಯನ್ನು ಹಾಕಿ ಆ ಗೆರೆಯನ್ನು ದಾಟಬಾರದೆಂದು ಅವರಿಗೆ ತಿಳಿಸು. ಯಾವ ವ್ಯಕ್ತಿಯಾಗಲಿ ಬೆಟ್ಟವನ್ನು ಮುಟ್ಟಿದರೆ ಅವನನ್ನು ಕಲ್ಲುಗಳಿಂದಾಗಲಿ ಬಾಣಗಳಿಂದಾಗಲಿ ಕೊಲ್ಲಬೇಕು. ಯಾವ ಪ್ರಾಣಿಯಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕೊಲ್ಲಬೇಕು. ಯಾರೂ ಬೆಟ್ಟವನ್ನು ಮುಟ್ಟಕೂಡದು. ಕೊಂಬಿನ ತುತ್ತೂರಿ ಊದಿದಾಗ ಜನರು ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು” ಎಂದನು.


ಯಜ್ಞವೇದಿಕೆಯ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಕೋಲುಗಳನ್ನು ಸೇರಿಸಬೇಕು. ಈ ಕೋಲುಗಳಿಂದ ಯಜ್ಞವೇದಿಕೆಯನ್ನು ಹೊತ್ತುಕೊಂಡು ಹೋಗಬೇಕು.


ಆರೋನನು ಯೆಹೋವನ ಸನ್ನಿಧಿಯಲ್ಲಿ ಬೆಂಕಿಯ ಮೇಲೆ ಧೂಪವನ್ನು ಹಾಕಬೇಕು. ಆಗ ಒಡಂಬಡಿಕೆಯ ಪೆಟ್ಟಿಗೆ ಮೇಲಿರುವ ಕೃಪಾಸವನ್ನು ಧೂಪದ ಹೊಗೆಯು ಮುಚ್ಚಿಕೊಳ್ಳುವುದು. ಹೀಗೆ ಮಾಡುವುದರಿಂದ ಆರೋನನು ಸಾಯುವುದಿಲ್ಲ.


ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.


ಬಳಿಕ ಅವರು ವೇದಿಕೆಯಲ್ಲಿ ಆರಾಧನೆಗಾಗಿ ಉಪಯೋಗಿಸಲ್ಪಡುವ ಎಲ್ಲಾ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳು ಯಾವುವೆಂದರೆ, ಅಗ್ಗಿಷ್ಟಿಗೆಗಳು, ಮುಳ್ಳುಚಮಚಗಳು, ಸಲಿಕೆಗಳು ಮತ್ತು ಬೋಗುಣಿಗಳು. ಅವರು ಇವುಗಳನ್ನು ತಾಮ್ರದ ವೇದಿಕೆಯ ಮೇಲೆ ಇಡಬೇಕು. ಬಳಿಕ ಅವರು ಶ್ರೇಷ್ಠವಾದ ತೊಗಲಿನ ಹೊದಿಕೆಯನ್ನು ಇವುಗಳಿಗೆಲ್ಲ ಹೊದಿಸಿ, ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಲ್ಲಿ ಸೇರಿಸಬೇಕು.


ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರ ಬಂದಾಗ ಸಾಯದಂತೆ ನೀವು ಅವರ ವಿಷಯದಲ್ಲಿ ಮಾಡಬೇಕಾದದ್ದೇನೆಂದರೆ, ಆರೋನನೂ ಅವನ ಪುತ್ರರೂ ಒಳಗೆ ಬಂದು, ಪ್ರತಿಯೊಬ್ಬ ಕೆಹಾತ್ಯನು ಮಾಡಬೇಕಾದ ಕೆಲಸವನ್ನು ಮತ್ತು ಹೊತ್ತುಕೊಂಡು ಹೋಗಬೇಕಾದದ್ದನ್ನು ತೋರಿಸಲಿ.


ಇಲ್ಲವಾದರೆ, ಕೆಹಾತ್ಯರು ಒಳಗೆ ಬಂದು ಪರಿಶುದ್ಧವಸ್ತುಗಳನ್ನು ಮುಟ್ಟುವರು. ಆ ಮಹಾ ಪರಿಶುದ್ಧವಸ್ತುಗಳನ್ನು ಅವರು ಒಂದು ಕ್ಷಣ ಮುಟ್ಟಿದರೂ ಸಾಯುತ್ತಾರೆ” ಎಂದು ಹೇಳಿದನು.


ಆ ಲೇವಿಯರು ನಿನಗೆ ಕಾವಲುಗಾರರಾಗಿರಬೇಕು ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲಿ ಯಜ್ಞವೇದಿಕೆಯನ್ನಾಗಲಿ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ.


ಚಾದೋಕನು ಮತ್ತು ಅವನೊಂದಿಗಿದ್ದ ಲೇವಿಯರೆಲ್ಲ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದರು. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಜೆರುಸಲೇಮಿನಿಂದ ಜನರೆಲ್ಲರೂ ಹೊರಗೆ ಹೋಗುವವರೆಗೆ ಎಬ್ಯಾತಾರನು ಪ್ರಾರ್ಥನೆಗಳನ್ನು ಮಾಡಿದನು.


ಆದ್ದರಿಂದ ಇನ್ನು ಮುಂದೆ ಲೇವಿಯರಿಗೆ ದೇವದರ್ಶನ ಗುಡಾರವನ್ನಾಗಲಿ ಅದರ ಸಾಮಾಗ್ರಿಗಳನ್ನಾಗಲಿ ಹೊರುವ ಅವಶ್ಯವಿಲ್ಲ” ಎಂದು ಹೇಳಿದ್ದನು.


ಯೆಹೋವನು ಮೋಶೆಗೆ, “ಕೆಳಗಿಳಿದು ಹೋಗಿ, ಜನರು ನನ್ನನ್ನು ನೋಡಲು ನನ್ನ ಹತ್ತಿರ ಬರಬಾರದೆಂದು ಅವರನ್ನು ಎಚ್ಚರಿಸು. ಇಲ್ಲವಾದರೆ ಅವರಲ್ಲಿ ಅನೇಕರು ಸಾಯುವರು.


ಇಸ್ರೇಲಿನ ಹಿರಿಯರೆಲ್ಲರು ಆ ಸ್ಥಳದಲ್ಲಿ ಒಟ್ಟುಗೂಡಿದರು. ನಂತರ ಯಾಜಕರು ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು