ಅರಣ್ಯಕಾಂಡ 4:25 - ಪರಿಶುದ್ದ ಬೈಬಲ್25 ಅವರು ಪವಿತ್ರ ಗುಡಾರದ ಬಟ್ಟೆಗಳನ್ನು, ದೇವದರ್ಶನಗುಡಾರ ಮತ್ತು ಅದರ ಹೊದಿಕೆ, ಅದರ ಮೇಲಿರುವ ಶ್ರೇಷ್ಠವಾದ ತೊಗಲಿನ ಹೊದಿಕೆ ಮತ್ತು ದೇವದರ್ಶನಗುಡಾರದಲ್ಲಿರುವ ಪ್ರವೇಶದ್ವಾರದ ಪರದೆಯನ್ನು ವರ್ಗಾಯಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು - ಅಂದರೆ; ಗುಡಾರ ಅದರ ಹೊದಿಕೆ ಅದರ ಮೇಲಿನ ಹಸನಾದ ತೊಗಲಿನ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು; ಅಂದರೆ ಗುಡಾರವು, ಅದರ ಹೊದಿಕೆಯು, ಅದರ ಮೇಲಣ ಕಡಲುಹಂದಿಯ ತೊಗಲಿನ ಹೊದಿಕೆಯು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು ಗುಡಾರದ ಪರದೆಗಳನ್ನೂ ದೇವದರ್ಶನ ಗುಡಾರವನ್ನೂ ಅದರ ಹೊದಿಕೆಯನ್ನೂ ಅದರ ಮೇಲಿರುವ ಕಡಲುಹಂದಿಯ ಚರ್ಮಗಳ ಹೊದಿಕೆಯನ್ನೂ ದೇವದರ್ಶನ ಗುಡಾರದ ಬಾಗಿಲಿನ ಪರದೆಯನ್ನೂ ಅಧ್ಯಾಯವನ್ನು ನೋಡಿ |
ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.