Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:26 - ಪರಿಶುದ್ದ ಬೈಬಲ್‌

26 ಅಂಗಳದ ಪರದೆಗಳನ್ನು, ಪವಿತ್ರ ಗುಡಾರವನ್ನು ಮತ್ತು ವೇದಿಕೆಯ ಸುತ್ತಲೂ ಇರುವ ಅಂಗಳ ಪ್ರವೇಶದ್ವಾರದ ಪರದೆಯನ್ನು, ಅವುಗಳ ಹಗ್ಗಗಳನ್ನು ಮತ್ತು ಇವುಗಳ ಎಲ್ಲಾ ಉಪಕರಣಗಳನ್ನು ವರ್ಗಾಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಗುಡಾರದ ಮತ್ತು ಬಲಿಪೀಠದ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆ, ಹಗ್ಗಗಳು ಮತ್ತು ಅವುಗಳ ಎಲ್ಲ ಉಪಕರಣಗಳು, ಇವುಗಳನ್ನು ಹೊರಬೇಕು; ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲ ಕೆಲಸಗಳನ್ನು ಅವರೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ದೇವದರ್ಶನದ ಗುಡಾರದ ಬಾಗಲಿನ ಪರದೆಯು, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಲಿನ ಪರದೆಯು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು; ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಿಲಿನ ಪರದೆಯನ್ನೂ ಅವುಗಳ ಹಗ್ಗಗಳನ್ನೂ, ಅವುಗಳ ಸೇವೆಯ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:26
4 ತಿಳಿವುಗಳ ಹೋಲಿಕೆ  

ಗುಡಾರದ ಗೂಟಗಳು, ಅಂಗಳದ ಗೂಟಗಳು ಮತ್ತು ಹಗ್ಗಗಳು,


“ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು.


ಬಳಿಕ ಅವನು ಅಂಗಳವನ್ನು ಮಾಡಿದನು. ದಕ್ಷಿಣ ಭಾಗದಲ್ಲಿ ನೂರು ಮೊಳ ಉದ್ದದ ಪರದೆಯ ಗೋಡೆಯನ್ನು ಮಾಡಿದನು. ಪರದೆಗಳು ಶ್ರೇಷ್ಠ ನಾರುಬಟ್ಟೆಯಿಂದ ಮಾಡಲಾಗಿದ್ದವು.


ಗೇರ್ಷೋನ್ಯರು ಮಾಡುವ ಎಲ್ಲಾ ಕೆಲಸಗಳನ್ನು ಅಂದರೆ ವರ್ಗಾವಣೆಗಾಗಿ ಸಾಮಾನುಗಳನ್ನು ಕಟ್ಟುವುದರಲ್ಲಿಯೂ ವರ್ಗಾವಣೆ ಮಾಡುವುದರಲ್ಲಿಯೂ ಆರೋನ ಮತ್ತು ಅವನ ಪುತ್ರರು ಮಾರ್ಗದರ್ಶನ ನೀಡುವರು. ಗೇರ್ಷೋನ್ಯರು ವರ್ಗಾಯಿಸುವ ಎಲ್ಲವನ್ನು ಅವರೇ ಕಾಯಬೇಕೆಂಬ ಜವಾಬ್ದಾರಿಕೆಯನ್ನು ನೀನು ಅವರಿಗೆ ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು