ಅರಣ್ಯಕಾಂಡ 4:3 - ಪರಿಶುದ್ದ ಬೈಬಲ್3 ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡಲು ಯೋಗ್ಯರಾದ ಮೂವತ್ತರಿಂದ ಐವತ್ತರೊಳಗಿನ ಎಲ್ಲಾ ಪುರುಷರನ್ನು ಲೆಕ್ಕಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮೂವತ್ತು ವರ್ಷವಾದವರನ್ನೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷದವರವರೆಗೆ ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕೆ ಬರುವವರನ್ನು ಲೆಕ್ಕಮಾಡು. ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೋಚಾದಾಕನ ಮಗನಾದ ಯೇಷೂವನು ಕೆಲಸವನ್ನು ಪ್ರಾರಂಭಿಸಿದರು. ಅವರ ಸಹೋದರರು, ಯಾಜಕರು, ಲೇವಿಯರು ಮತ್ತು ಅವರೊಂದಿಗೆ ಸೆರೆಯಿಂದ ಬಂದವರೆಲ್ಲರೂ ಕೆಲಸ ಮಾಡಿದರು. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಲೇವಿಯವರನ್ನು ಮೇಲ್ವಿಚಾರಕರನ್ನಾಗಿ ಅವರು ನೇಮಿಸಿದರು.
ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.