Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:33 - ಪರಿಶುದ್ದ ಬೈಬಲ್‌

33 ದೇವದರ್ಶನಗುಡಾರಕ್ಕೋಸ್ಕರ ಮೆರಾರೀಯರು ಮಾಡತಕ್ಕ ಕೆಲಸ ಇದೇ. ಅವರ ಕೆಲಸವನ್ನು ಮೇಲ್ವಿಚಾರಣೆ ಮಾಡುವುದು ಮಹಾಯಾಜಕ ಆರೋನನ ಮಗನಾದ ಈತಾಮಾರನ ಜವಾಬ್ದಾರಿಯಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗ ಈತಮಾರನ ಕೈಕೆಳಗೆ ಇದನ್ನೆಲ್ಲಾ ಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಕೈ ಕೆಳಗೆ ಅದನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮೆರಾರೀಯ ಪುತ್ರರ ಕುಟುಂಬಗಳ ಸೇವೆಯೂ, ದೇವದರ್ಶನದ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೆ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:33
7 ತಿಳಿವುಗಳ ಹೋಲಿಕೆ  

ದೇವದರ್ಶನಗುಡಾರಕ್ಕೋಸ್ಕರ ಮತ್ತು ತಮ್ಮ ಕಾವಲಿನ ಕರ್ತವ್ಯದಲ್ಲಿ ಗೇರ್ಷೋನ್ಯರು ಮಾಡಬೇಕಾದ ಕೆಲಸ ಇದೇ. ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಕನಾಗಿರಬೇಕು.”


ಆ ಸಮಯದಲ್ಲಿ ಒಬ್ಬನು ತನ್ನ ಸ್ವಂತ ಕುಟುಂಬದ ಸಹೋದರನನ್ನು ಹಿಡಿದು, “ನಿನಗೆ ನಿಲುವಂಗಿಯದೆ. ಆದ್ದರಿಂದ ನೀನು ನಮಗೆ ನಾಯಕನಾಗು. ಈ ಅವಶೇಷಗಳೆಲ್ಲಾ ನಿನಗೆ ಅಧೀನವಾಗಿರಲಿ” ಎಂದು ಹೇಳುವರು.


ಬಳಿಕ ಯೆಹೋಶುವನು ಯಾಜಕರಿಗೆ, “ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜನಗಳ ಮುಂದೆ ನದಿಯ ಕಡೆಗೆ ನಡೆಯಿರಿ” ಎಂದನು. ಯಾಜಕರು ಪೆಟ್ಟಿಗೆಯನ್ನು ಹೊತ್ತುಕೊಂಡು ಜನರ ಮುಂದೆ ನಡೆದರು.


ಅಂಗಳದ ಸ್ತಂಭಗಳು ಮತ್ತು ಅವುಗಳ ಗದ್ದಿಗೇಕಲ್ಲುಗಳು, ಅಗುಳಿಗಳು, ಹಗ್ಗಗಳು ಮತ್ತು ಅವರ ಕೆಲಸಕ್ಕೆ ಬೇಕಾದ ಎಲ್ಲಾ ಉಪಕರಣಗಳು. ಅವರು ವರ್ಗಾಯಿಸಬೇಕಾದ ಮತ್ತು ಕಾವಲುಕಾಯಬೇಕಾದ ವಸ್ತುಗಳನ್ನು ನೀನು ಹೆಸರೆಸರಾಗಿ ಅವರಿಗೆ ವಹಿಸಿಕೊಡಬೇಕು.


ಮೋಶೆ ಆರೋನರೂ, ಸಮುದಾಯದ ಪ್ರಧಾನರೂ ಕುಲ ಮತ್ತು ಕುಟುಂಬಗಳಿಗನುಗುಣವಾಗಿ ಕೆಹಾತ್ಯರಲ್ಲಿ ಮೂವತ್ತು ವರ್ಷದಿಂದ ಮೊದಲುಗೊಂಡು ಐವತ್ತು ವರ್ಷದೊಳಗಿರುವ ಗಂಡಸರನ್ನು ಲೆಕ್ಕಿಸಿದರು. ದೇವದರ್ಶನಗುಡಾರಕ್ಕೋಸ್ಕರ ಸೇವೆಯ ದಳದಲ್ಲಿ ಕೆಲಸ ಮಾಡಲು ಯೋಗ್ಯರಾದ ಗಂಡಸರನ್ನೇ ಅವರು ಲೆಕ್ಕಿಸಿದರು.


ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು.


ಬಳಿಕ ಮೆರಾರೀಯರ ಕೆಲಸಕ್ಕೆ ಬೇಕಾಗಿದ್ದ ನಾಲ್ಕು ಬಂಡಿಗಳನ್ನೂ ನಾಲ್ಕು ಜೊತೆ ಎತ್ತುಗಳನ್ನೂ ಅವರಿಗೆ ಕೊಟ್ಟನು. ಇವರೆಲ್ಲರು ಮಾಡುವ ಕೆಲಸಕ್ಕೆ ಯಾಜಕನಾದ ಆರೋನನ ಮಗನಾದ ಈತಾಮಾರನು ಮೇಲ್ವಿಚಾರಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು