Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:7 - ಪರಿಶುದ್ದ ಬೈಬಲ್‌

7 “ಬಳಿಕ ಅವರು ಪವಿತ್ರ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಬೇಕು. ಪಾನದ್ರವ್ಯಾರ್ಪಣೆಗಳಿಗಾಗಿ ತಟ್ಟೆಗಳನ್ನೂ ಚಮಚಗಳನ್ನೂ ಬಟ್ಟಲುಗಳನ್ನೂ ಹೂಜೆಗಳನ್ನೂ ವಿಶೇಷ ರೊಟ್ಟಿಯನ್ನೂ ಮೇಜಿನ ಮೇಲೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಸನ್ನಿಧಿ ಕಾಣಿಕೆಯ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಿ ಅದರ ಮೇಲೆ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು ಹಾಗೂ ದಾನ್ಯದ್ರವ್ಯಾರ್ಪಣೆಯ ಬಟ್ಟಲುಗಳನ್ನು ಅವರು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಗಳನ್ನು ಅದರ ಮೇಲೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳೂ ಅದರ ಮೇಲೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಸಮ್ಮುಖದ ರೊಟ್ಟಿಯ ಮೇಜಿನ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದರ ಮೇಲೆ ಪಾತ್ರೆಗಳನ್ನು, ಸೌಟುಗಳನ್ನು, ಬೋಗುಣಿಗಳನ್ನು ಮತ್ತು ಪಾನಾರ್ಪಣೆಯ ಹೂಜಿಗಳನ್ನು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಯನ್ನು ಅದರ ಮೇಲೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:7
5 ತಿಳಿವುಗಳ ಹೋಲಿಕೆ  

ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಬಳಿಕ ಅವುಗಳ ಮೇಲೆ ಕೆಂಪುಬಟ್ಟೆಯನ್ನು ಹಾಸಿ, ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಅದಕ್ಕೆ ಹೊದಿಸಬೇಕು. ಬಳಿಕ ಹೊರುವ ಕೋಲುಗಳನ್ನು ಮೇಜಿನ ಬಳೆಗಳಲ್ಲಿ ಸೇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು