Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:15 - ಪರಿಶುದ್ದ ಬೈಬಲ್‌

15 ಅವನು ಅವಳನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. ಅಲ್ಲದೆ ಅವನು ಮೂರು ಸೇರು ಗೋಧಿಹಿಟ್ಟನ್ನು ಕಾಣಿಕೆಯಾಗಿ ಯಾಜಕನಿಗೆ ತಂದು ಕೊಡಬೇಕು. ಅವನು ಅದರ ಮೇಲೆ ಎಣ್ಣೆ ಹಾಕಬಾರದು; ಅವನು ಅದರ ಮೇಲೆ ಧೂಪಹಾಕಬಾರದು; ಯಾಕೆಂದರೆ ಇದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯಾಗಿದೆ. ಆಕೆಯ ದೋಷವನ್ನು ಹೊರಪಡಿಸಲು ಕೊಟ್ಟಂಥ ಧಾನ್ಯಸಮರ್ಪಣೆ ಇದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರಕೊಂಡು ಬರಬೇಕು. ಮತ್ತು ಅವಳ ಸಂಗತಿಯನ್ನು ವಿಚಾರಿಸುವದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರಸಂಶಯವನ್ನು ಸೂಚಿಸುವದಕ್ಕೂ ಪಾಪವನ್ನು ಹೊರಪಡಿಸುವದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ಮನುಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತರಬೇಕು. ಅವಳಿಗೋಸ್ಕರ ಕಾಣಿಕೆಯಾಗಿ ಒಂದು ಓಮರ್ ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕಬಾರದು. ಏಕೆಂದರೆ ಅದು ಸಂಶಯವನ್ನು ಸೂಚಿಸುವುದಕ್ಕೂ ಅಪರಾಧವನ್ನು ಹೊರಪಡಿಸುವುದಕ್ಕೂ ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:15
9 ತಿಳಿವುಗಳ ಹೋಲಿಕೆ  

ಇಸ್ರೇಲರು ಅವರ ಮೇಲೆ ಇನ್ನು ಎಂದಿಗೂ ಭರವಸವಿಡುವುದಿಲ್ಲ. ಇಸ್ರೇಲರು ಸಹಾಯಕ್ಕಾಗಿ ದೇವರ ಬಳಿಗೆ ಹೋಗದೆ ಈಜಿಪ್ಟಿನವರ ಮೇಲೆ ಭರವಸವಿಟ್ಟಿದ್ದ ಪಾಪವನ್ನು ಅರಿತುಕೊಳ್ಳುವರು. ಆಗ ಅವರು ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.”


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


“ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.


ಆ ಜನರು ಪ್ರತಿವರ್ಷ ಅರ್ಪಿಸುತ್ತಿದ್ದ ಯಜ್ಞಗಳು ಅವರ ಪಾಪಗಳನ್ನು ನೆನಪಿಗೆ ತರುತ್ತಿದ್ದವು.


ನಾನು ಹದಿನೈದು ತುಂಡು ಬೆಳ್ಳಿಯನ್ನೂ ಒಂಭತ್ತು ಕ್ವಿಂಟಾಲ್ ಜವೆಗೋಧಿಯನ್ನೂ ಕೊಟ್ಟು ಆಕೆಯನ್ನು ಕೊಂಡುಕೊಂಡೆನು.


“ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು.


“ಯಾಜಕನು ಅವಳನ್ನು ತಂದು ಯೆಹೋವನ ಎದುರಿನಲ್ಲಿ ನಿಲ್ಲಿಸಬೇಕು.


ಇಸ್ರೇಲ್ ಜನರಿಗೆ ಆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನ್ನು ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”


“ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು