ಅರಣ್ಯಕಾಂಡ 5:19 - ಪರಿಶುದ್ದ ಬೈಬಲ್19 “ಬಳಿಕ ಯಾಜಕನು ಸ್ತ್ರೀಗೆ ಸುಳ್ಳಾಡದೆ ಸತ್ಯವನ್ನೇ ಹೇಳಬೇಕೆಂದು ಪ್ರಮಾಣ ಮಾಡಿಸುವನು. ಯಾಜಕನು ಅವಳಿಗೆ ಹೀಗೆನ್ನಬೇಕು: ‘ನೀನು ಪರಪುರುಷನ ಸಂಗ ಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕೃತ್ಯವನ್ನು ಮಾಡದೆ ಇರುವವಳಾದರೆ, ಶಾಪವನ್ನು ಉಂಟುಮಾಡುವ ಕಹಿನೀರಿನಿಂದ ನಿನಗೆ ಹಾನಿಯಾಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದೇ ಯಾಜಕನು ಅವಳಿಂದ ಶಪಥಪೂರ್ವಕ ಪ್ರಮಾಣ ಮಾಡಿಸುತ್ತಾ ಅವಳಿಗೆ - “ನೀನು ನಿನ್ನ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ, ಪರಪುರುಷನನ್ನು ಕೂಡದೆ, ಅಶುದ್ಧಳಾಗದೆ ಇರುವವಳಾದರೆ ಶಾಪ ತರುವ ಈ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯಾಜಕನು ಅವಳಿಂದ ಶಪಥಪೂರ್ವಕವಾದ ಪ್ರಮಾಣವಾಕ್ಯವನ್ನು ನುಡಿಸುವವನಾಗಿ ಹೀಗನ್ನಬೇಕು - ನೀನು ಪರಪುರುಷನ ಸಂಗಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕಾರ್ಯವನ್ನು ಮಾಡದೆ ಇರುವವಳಾದರೆ ಶಾಪವನ್ನುಂಟು ಮಾಡುವ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯಾಜಕನು ಅವಳನ್ನು ಪ್ರಮಾಣ ಮಾಡಿಸಿ, ಸ್ತ್ರೀಗೆ ಹೇಳಬೇಕಾದದ್ದು, “ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುವಾಗ, ಒಬ್ಬ ಪರಪುರುಷನು ನಿನ್ನ ಸಂಗಡ ಮಲಗಿರದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೆ ಇದ್ದರೆ, ಶಾಪವನ್ನು ಉಂಟುಮಾಡುವ ಈ ನೀರು ನಿನಗೆ ಯಾವ ಹಾನಿಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |