ಅರಣ್ಯಕಾಂಡ 5:25 - ಪರಿಶುದ್ದ ಬೈಬಲ್25 “ಯಾಜಕನು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯನ್ನು ಆಕೆಯ ಕೈಗಳಿಂದ ತೆಗೆದುಕೊಂಡು ಅದನ್ನು ಯೆಹೋವನ ಮುಂದೆ ಪ್ರತಿಷ್ಠಿಸಿ, ಬಳಿಕ ಅದನ್ನು ವೇದಿಕೆಯ ಮೇಲೆ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಮೇಲೆ ವ್ಯಭಿಚಾರ ಸಂಶಯ ಸೂಚಕವಾದ ಆ ಹಿಟ್ಟನ್ನು ಅವಳ ಕೈಯಿಂದ ತೆಗೆದುಕೊಂಡ ಯಾಜಕನು ಬಲಿಪೀಠದ ಹತ್ತಿರಕ್ಕೆ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಯಾಜಕನು ಸ್ತ್ರೀಯ ಕೈಯಿಂದ ವ್ಯಭಿಚಾರ ಸಂಶಯ ವಿಷಯವಾದ ಆ ಹಿಟ್ಟನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿ ಯಜ್ಞವೇದಿಯ ಹತ್ತಿರ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ಸಂಶಯ ಸೂಚಕ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನೈವೇದ್ಯ ಮಾಡಿ, ಬಲಿಪೀಠದ ಸಮೀಪಕ್ಕೆ ತರಬೇಕು. ಅಧ್ಯಾಯವನ್ನು ನೋಡಿ |