ಅರಣ್ಯಕಾಂಡ 5:8 - ಪರಿಶುದ್ದ ಬೈಬಲ್8 ದಂಡವನ್ನು ತೆಗೆದುಕೊಳ್ಳತಕ್ಕವನು ತೀರಿಹೋಗಿ, ಹತ್ತಿರ ಸಂಬಂಧಿಯೂ ಇಲ್ಲದ ಪಕ್ಷಕ್ಕೆ, ಆ ದ್ರವ್ಯವನ್ನು ಯೆಹೋವನಿಗೆ ಕೊಡಬೇಕು. ಅವನು ಯಾಜಕನಿಗೆ ಪೂರ್ಣ ಬೆಲೆಯನ್ನು ಕೊಡಬೇಕು. ತಪ್ಪು ಮಾಡಿದವನು ಯಾಜಕನಿಗೆ ಒಂದು ಟಗರನ್ನೂ ತಂದುಕೊಡಬೇಕು. ಈ ಟಗರನ್ನು ತಪ್ಪುಮಾಡಿದವನ ಪ್ರಾಯಶ್ಚಿತ್ತಕ್ಕಾಗಿ ಯಜ್ಞಮಾಡಬೇಕು. ಆದರೆ ಉಳಿದದ್ದನ್ನು ಯಾಜಕನು ಇಟ್ಟುಕೊಳ್ಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದಂಡವನ್ನು ತೆಗೆದುಕೊಳ್ಳ ತಕ್ಕವನು ತೀರಿಹೋಗಿ ಬಾಧ್ಯಸ್ಥನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯ ಸರ್ವೇಶ್ವರನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಅರ್ಪಿಸಲ್ಪಡುವ ಪ್ರಾಯಶ್ಚಿತ್ತ ಬಲಿಪ್ರಾಣಿಯಾದ ಟಗರು ಇವೆರಡೂ ಯಾಜಕನಿಗೆ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದಂಡವನ್ನು ತೆಗೆದುಕೊಳ್ಳತಕ್ಕವನು [ತೀರಿಹೋಗಿ] ಬಾಧ್ಯನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತಯಜ್ಞದ ಟಗರು ಈ ಎರಡೂ ಯಾಜಕನಿಗೆ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಅಪರಾಧಕ್ಕೆ ಬದಲು ಕೊಡುವುದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಅದು ಯೆಹೋವ ದೇವರಿಗೆ ಸೇರಬೇಕು. ಅದು ದೋಷಪರಿಹಾರಕ್ಕಾಗಿ ಅರ್ಪಿಸಲಾಗುವ ಪ್ರಾಯಶ್ಚಿತ್ತದ ಟಗರು, ಇವೆರಡೂ ಯಾಜಕನಿಗೆ ಸೇರಬೇಕು. ಅಧ್ಯಾಯವನ್ನು ನೋಡಿ |