ಅರಣ್ಯಕಾಂಡ 6:11 - ಪರಿಶುದ್ದ ಬೈಬಲ್11 ಆಗ ಯಾಜಕನು ಒಂದನ್ನು ದೋಷಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಅವನಿಗೆ ಹೆಣವು ಸೋಂಕಿ ಅವನು ಅಶುದ್ಧನಾದದ್ದರಿಂದ ಈ ಸರ್ವಾಂಗಹೋಮವು ಅವನಿಗೆ ಪ್ರಾಯಶ್ಚಿತ್ತ ಯಜ್ಞವಾಗಿದೆ. ಆ ಸಮಯದಲ್ಲಿ, ಅವನು ತನ್ನ ತಲೆಯ ಕೂದಲನ್ನು ಯೆಹೋವನಿಗೆ ಕಾಣಿಕೆಯಾಗಿ ಮತ್ತೆ ಹರಕೆ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯಾಜಕನು ದೋಷಪರಿಹಾರ ಬಲಿಯನ್ನಾಗಿ ಒಂದನ್ನೂ ಸಂಪೂರ್ಣ ದಹನ ಬಲಿಯನ್ನಾಗಿ ಇನ್ನೊಂದನ್ನೂ ಸಮರ್ಪಿಸಲಿ. ಹೀಗೆ ಶವಸೋಂಕಿದವನಿಗಾಗಿ ದೋಷಪರಿಹಾರಮಾಡಿ ಅವನ ತಲೆಗೂದಲು ಅಂದಿನಿಂದ ಪವಿತ್ರವೆಂದು ನಿರ್ಣಯಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾಜಕನು ದೋಷಪರಿಹಾರಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಇನ್ನೊಂದನ್ನೂ ಸಮರ್ಪಿಸಿ ಶವಸೋಂಕಿದವನಿಗೋಸ್ಕರ ದೋಷಪರಿಹಾರಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯಾಜಕನು ಒಂದನ್ನು ದೋಷಪರಿಹಾರಕ ಬಲಿಯಾಗಿಯೂ, ಇನ್ನೊಂದನ್ನು ದಹನಬಲಿಯಾಗಿ ಅರ್ಪಿಸಿ, ಅವರು ಶವದ ಹತ್ತಿರವಿದ್ದು ಪಾಪಮಾಡಿದ್ದರಿಂದ, ಅವರಿಗೋಸ್ಕರ ಆ ದಿವಸದಲ್ಲಿ ಅವರ ತಲೆಯನ್ನು ಪ್ರತಿಷ್ಠಿಸಬೇಕು. ಅಧ್ಯಾಯವನ್ನು ನೋಡಿ |