18 ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
18 ಬಳಿಕ ನಾಜೀರ ವ್ರತಸ್ಥನು ತನ್ನ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನ ಬಲಿಯ ದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
18 ಆಗ ನಾಜೀರನು ತನ್ನ ದೀಕ್ಷೆಯನ್ನು ಸೂಚಿಸುವ ತಲೆಯಕೂದಲನ್ನು ದೇವದರ್ಶನದ ಗುಡಾರದ ಬಾಗಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
ನೀನು ಅವರನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಿ ಅವರ ಶುದ್ಧಾಚಾರದ ಸಂಪ್ರದಾಯದಲ್ಲಿ ಭಾಗವಹಿಸು. ಅವರ ಖರ್ಚುವೆಚ್ಚನ್ನೆಲ್ಲ ಕೊಡು. ಬಳಿಕ ಅವರು ತಮ್ಮ ತಲೆಬೋಳಿಸಿಕೊಳ್ಳಲಿ. ನೀನು ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿದ ಸಂಗತಿಗಳು ಸತ್ಯವಲ್ಲವೆಂದು ಅವರೆಲ್ಲರಿಗೂ ಮನದಟ್ಟಾಗುವುದು. ಸ್ವತಃ ನೀನೇ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗುತ್ತಿರುವುದನ್ನು ಅವರೆಲ್ಲರೂ ಕಣ್ಣಾರೆ ಕಾಣುವರು.
ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.
ಆಗ ಪೌಲನು ಆ ನಾಲ್ಕುಮಂದಿಯನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಮರುದಿನ ಪೌಲನು, ಶುದ್ಧಾಚಾರದ ವ್ರತದಲ್ಲಿ ಭಾಗವಹಿಸಿದನು. ಬಳಿಕ ಅವನು ದೇವಾಲಯಕ್ಕೆ ಹೋಗಿ ಶುದ್ಧಾಚಾರದ ಸಂಪ್ರದಾಯ ಮುಗಿಯುವ ದಿನವನ್ನು ಪ್ರಕಟಿಸಿದನು. ಕೊನೆಯ ದಿನದಲ್ಲಿ ಪ್ರತಿಯೊಬ್ಬ ವ್ಯಕ್ತಿಗಾಗಿಯೂ ಯಜ್ಞವನ್ನರ್ಪಿಸಬೇಕಾಗಿತ್ತು.
“ಅವನ ವ್ರತದ ಕಾಲದಲ್ಲಿ ಕ್ಷೌರದ ಕತ್ತಿಯು ಅವನ ತಲೆಯನ್ನು ಸೋಂಕಬಾರದು. ಯೆಹೋವನಿಗೋಸ್ಕರ ಪ್ರತಿಷ್ಠಿತವಾದ ತನ್ನ ಕಾಲವನ್ನು ಪೂರ್ಣಗೊಳಿಸುವ ತನಕ ಅವನು ಪರಿಶುದ್ಧನಾಗಿರಬೇಕು. ತನ್ನ ವ್ರತದ ದಿನಗಳು ಮುಗಿಯುವ ತನಕ ಅವನು ಕೂದಲನ್ನು ಬೆಳೆಸಿಕೊಳ್ಳಬೇಕು.
ಯಾಜಕನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ಯೆಹೋವನಿಗೆ ಸಮರ್ಪಿಸುವನು. ಬಳಿಕ ಅವನು ಟಗರನ್ನು ವಧಿಸಿ ಸಮಾಧಾನಯಜ್ಞವಾಗಿ ಅರ್ಪಿಸುವನು. ಅವನು ಅದನ್ನು ಧಾನ್ಯಸಮರ್ಪಣೆ ಮತ್ತು ಪಾನದ್ರವ್ಯ ಸಮರ್ಪಣೆಯೊಂದಿಗೆ ಅರ್ಪಿಸುವನು.