ಅರಣ್ಯಕಾಂಡ 6:21 - ಪರಿಶುದ್ದ ಬೈಬಲ್21 “ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತ ಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಮೀರಿ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತವಿಧಿಗನುಸಾರವಾಗಿ ಕೊಡಲೇಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇದುವೇ ನಾಜೀರ ವ್ರತಸ್ಥರು ಅನುಸರಿಸಬೇಕಾದ ವಿಧಿ. ತಮ್ಮ ವ್ರತಪೂರ್ತಿಗಾಗಿ ಸರ್ವೇಶ್ವರನಿಗೆ ಅವರು ಸಮರ್ಪಿಸಬೇಕಾದ ಕಾಣಿಕೆ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತ ವಿಧಿಗನುಸಾರ ಕೊಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತ್ಯನುಸಾರ ಹೆಚ್ಚಾಗಿಯೂ ಕೊಡಬಹುದು; ಆದರೆ ತಾವು ಕೊಡುತ್ತೇವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ ‘ಪ್ರಮಾಣ ಮಾಡಿಕೊಂಡ ನಾಜೀರರ ನಿಯಮವು ಇದೇ. ಸಂಬಂಧಪಟ್ಟದ್ದರೊಂದಿಗೆ ತಮ್ಮ ಕೈಲಾದ ಮಟ್ಟಿಗೆ ಅವರು ತಮ್ಮ ಪ್ರತ್ಯೇಕಿಸುವಿಕೆಗಾಗಿ ಯೆಹೋವ ದೇವರಿಗೆ ಕಾಣಿಕೆ ಅರ್ಪಿಸತಕ್ಕದ್ದು. ನಾಜೀರ ವ್ರತದ ಕ್ರಮದ ಪ್ರಕಾರ, ನೀವು ಮಾಡಿದ ಪ್ರಮಾಣಕ್ಕನುಸಾರವಾಗಿ ತಮ್ಮ ವ್ರತದ ಕ್ರಮಗಳನ್ನು ನೆರವೇರಿಸಬೇಕು.’ ” ಅಧ್ಯಾಯವನ್ನು ನೋಡಿ |