Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:3 - ಪರಿಶುದ್ದ ಬೈಬಲ್‌

3 ಆ ಸಮಯದಲ್ಲಿ ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು; ದ್ರಾಕ್ಷಿಯ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣ ದ್ರಾಕ್ಷಿಯನ್ನು ಸಹ ತಿನ್ನಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದ್ರಾಕ್ಷಾರಸವನ್ನು ಹಾಗೂ ಮದ್ಯಪಾನವನ್ನು ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣಗಿದ ದ್ರಾಕ್ಷಿಹಣ್ಣನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮದ್ಯವನ್ನೂ ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು; ದ್ರಾಕ್ಷೇ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದ್ರಾಕ್ಷಾರಸಕ್ಕೂ ಮದ್ಯಪಾನಕ್ಕೂ ದೂರವಾಗಿದ್ದು, ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ, ದ್ರಾಕ್ಷಿಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ ಹಸಿಯದಾಗಲಿ, ಒಣಗಿದ್ದಾಗಲಿ ದ್ರಾಕ್ಷಿಹಣ್ಣನ್ನು ತಿನ್ನದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:3
15 ತಿಳಿವುಗಳ ಹೋಲಿಕೆ  

ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


ತಿಮೊಥೆಯನೇ, ನೀನು ನೀರನ್ನು ಮಾತ್ರ ಕುಡಿಯದೆ ಸ್ವಲ್ಪ ದ್ರಾಕ್ಷಾರಸವನ್ನು ಸಹ ಕುಡಿಯಬೇಕು. ಇದರಿಂದ ನಿನ್ನ ಜೀರ್ಣಶಕ್ತಿಯು ಹೆಚ್ಚುವುದರಿಂದ ಪದೇಪದೇ ಅಸ್ವಸ್ಥನಾಗುವುದಿಲ್ಲ.


ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.


“ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ.


ಅವಳು ನಿಷಿದ್ಧವಾದ ಯಾವ ಆಹಾರವನ್ನೂ ತಿನ್ನಬಾರದು. ಹೀಗೆ ನಾನು ಅವಳಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಬೇಕು” ಎಂದು ಹೇಳಿದನು.


“ನೀನು ಮತ್ತು ನಿನ್ನ ಪುತ್ರರು ದೇವದರ್ಶನದ ಗುಡಾರದೊಳಗೆ ಬರುವಾಗ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದು. ನೀವು ಅವುಗಳನ್ನು ಕುಡಿದರೆ ಸಾಯುವಿರಿ. ಈ ಕಟ್ಟಳೆಯು ನಿಮ್ಮ ಸಂತತಿಯವರಿಗೆ ಶಾಶ್ವತವಾಗಿದೆ.


ಎಲ್ಲಾ ವಿಧವಾದ ಕೆಟ್ಟತನದಿಂದ ದೂರವಾಗಿರಿ.


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ಅವನು ಹರಕೆ ಮಾಡಿಕೊಂಡಿರುವ ದಿನಗಳಲ್ಲಿ ದ್ರಾಕ್ಷಾಲತೆಯಿಂದ ಉತ್ಪನ್ನವಾಗುವ ಯಾವದನ್ನೂ ತಿನ್ನಬಾರದು. ಅವನು ದ್ರಾಕ್ಷಿಯ ಬೀಜವನ್ನಾಗಲಿ ಸಿಪ್ಪೆಯನ್ನಾಗಲಿ ತಿನ್ನಬಾರದು.


ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡಬೇಡ.


ನಿಮ್ಮ ಕೆಲವು ಗಂಡುಮಕ್ಕಳನ್ನು ನಾನು ಪ್ರವಾದಿಗಳನ್ನಾಗಿ ಮಾಡಿದೆನು. ಇನ್ನು ಕೆಲವರನ್ನು ನಾಜೀರರನ್ನಾಗಿ ಮಾಡಿದೆನು. ಇಸ್ರೇಲ್ ಜನರೇ, ಇವು ಸತ್ಯವಾದ ಮಾತುಗಳು,” ಇವು ಯೆಹೋವನ ನುಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು