ಅರಣ್ಯಕಾಂಡ 6:4 - ಪರಿಶುದ್ದ ಬೈಬಲ್4 ಅವನು ಹರಕೆ ಮಾಡಿಕೊಂಡಿರುವ ದಿನಗಳಲ್ಲಿ ದ್ರಾಕ್ಷಾಲತೆಯಿಂದ ಉತ್ಪನ್ನವಾಗುವ ಯಾವದನ್ನೂ ತಿನ್ನಬಾರದು. ಅವನು ದ್ರಾಕ್ಷಿಯ ಬೀಜವನ್ನಾಗಲಿ ಸಿಪ್ಪೆಯನ್ನಾಗಲಿ ತಿನ್ನಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂಥವನು ವ್ರತ ಕೈಗೊಂಡು ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಬಳ್ಳಿಯಿಂದ ಉತ್ಪನ್ನವಾದ ಹೀಚನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳೆಲ್ಲಾ ದ್ರಾಕ್ಷಾಲತೆಯಿಂದ ಉತ್ಪನ್ನವಾದ ಹೀಚನ್ನಾದರೂ ತೃಣವನ್ನಾದರೂ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತಮ್ಮ ನಾಜೀರತನದ ದಿವಸಗಳಲ್ಲೆಲ್ಲಾ ದ್ರಾಕ್ಷಿ ಬೀಜ ಮೊದಲುಗೊಂಡು ಸಿಪ್ಪೆಯವರೆಗೂ, ದ್ರಾಕ್ಷಿಬಳ್ಳಿಯಲ್ಲಿ ಬೆಳೆದದ್ದು ಯಾವುದನ್ನಾದರೂ ತಿನ್ನಬಾರದು. ಅಧ್ಯಾಯವನ್ನು ನೋಡಿ |