5 “ಅವನ ವ್ರತದ ಕಾಲದಲ್ಲಿ ಕ್ಷೌರದ ಕತ್ತಿಯು ಅವನ ತಲೆಯನ್ನು ಸೋಂಕಬಾರದು. ಯೆಹೋವನಿಗೋಸ್ಕರ ಪ್ರತಿಷ್ಠಿತವಾದ ತನ್ನ ಕಾಲವನ್ನು ಪೂರ್ಣಗೊಳಿಸುವ ತನಕ ಅವನು ಪರಿಶುದ್ಧನಾಗಿರಬೇಕು. ತನ್ನ ವ್ರತದ ದಿನಗಳು ಮುಗಿಯುವ ತನಕ ಅವನು ಕೂದಲನ್ನು ಬೆಳೆಸಿಕೊಳ್ಳಬೇಕು.
5 “ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
5 ಅವನು ತನ್ನ ವ್ರತ ದಿನಗಳಲ್ಲೆಲ್ಲಾ ಕ್ಷೌರ ಮಾಡಿಸಿಕೊಳ್ಳಬಾರದು. ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ವ್ರತಬದ್ಧನಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬೆಳೆಯಬಿಡಬೇಕು.
5 ಅವನು ತನ್ನ ಹರಕೆಯ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
5 “ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು.
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು
ಕೊನೆಗೆ ಸಂಸೋನನು ದೆಲೀಲಳಿಗೆ ಎಲ್ಲವನ್ನು ಹೇಳಿದನು. “ನಾನೆಂದೂ ನನ್ನ ತಲೆಕೂದಲನ್ನು ಕತ್ತರಿಸಿಕೊಂಡಿಲ್ಲ. ನಾನು ಹುಟ್ಟುವ ಮೊದಲೇ ನನ್ನನ್ನು ದೇವರಿಗೆ ಪ್ರತಿಷ್ಠಿಸಲಾಗಿತ್ತ್ತು. ಯಾರಾದರೂ ನನ್ನ ತಲೆಬೋಳಿಸಿದರೆ ನಾನು ನನ್ನ ಶಕ್ತಿಯನ್ನು ಕಳೆದುಕೊಳ್ಳುತ್ತೇನೆ. ನಾನು ಬೇರೆ ಮನುಷ್ಯರಷ್ಟೇ ದುರ್ಬಲನಾಗುತ್ತೇನೆ” ಎಂದು ಹೇಳಿದನು.
ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.
ಸಂಸೋನನು ಅವಳ ತೊಡೆಯ ಮೇಲೆ ಮಲಗಿ ನಿದ್ರೆಮಾಡಿದನು. ಆಗ ಅವಳು ಸಂಸೋನನ ಏಳುಜಡೆಗಳನ್ನು ಬೋಳಿಸಲು ಒಬ್ಬ ಮನುಷ್ಯನನ್ನು ಒಳಗೆ ಕರೆದಳು. ಅವನು ಆ ಏಳು ಜಡೆಗಳನ್ನು ಬೋಳಿಸಲು, ಅವನು ಇತರರಂತೆ ದುರ್ಬಲನಾದನು.
ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.
“ಆ ಯಾಜಕರು ತಮ್ಮ ತಲೆಯನ್ನು ಬೋಳಿಸುವದೂ ಇಲ್ಲ ಮತ್ತು ತಲೆಕೂದಲನ್ನು ಉದ್ದವಾಗಿ ಬೆಳೆಸುವದೂ ಇಲ್ಲ. ಇದು ಅವರಲ್ಲಿರುವ ಶೋಕವನ್ನು ಸೂಚಿಸುತ್ತದೆ. ಯಾಜಕರು ಯೆಹೋವನ ಸೇವೆಮಾಡುವಾಗ ಸಂತೋಷದಿಂದಿರಬೇಕು. ಅವರು ತಮ್ಮ ತಲೆಕೂದಲನ್ನು ಸಣ್ಣದಾಗಿರಿಸುವದಕ್ಕೆ ಕತ್ತರಿಸಬಹುದು.